LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿ.ಎಚ್.ಡಿ. ಅಧ್ಯಯನಕ್ಕೆ ಮಾಸಿಕ ವ್ಯಾಸಂಗ ವೇತನ: ಅರ್ಜಿ ಆಹ್ವಾನ

 

ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನಕ್ಕಾಗಿ (ಫೆಲೋಶಿಪ್) ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿರಬೇಕು. ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ 2023ರ ಜನವರಿ 30 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರಬೇಕು. ಹೊಸ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿಎಚ್.ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ (ಫೆಲೋಶಿಪ್) ಕ್ಕಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದಿನ ಎರಡು ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ ರೂ. 4.50 ಲಕ್ಷ ಮತ್ತು 2(ಎ), 3(ಎ) ಹಾಗೂ 3(ಬಿ)ಗೆ 3.50 ಲಕ್ಷ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು 2024ರ ಜನವರಿ 6 ಕೊನೆಯ ದಿನವಾಗಿದ್ದು, ಇಲಾಖಾ ವೆಬ್ ಸೈಟ್  https://bcwd.karnataka.gov.in/ ನಲ್ಲಿ ಹೆಚ್ಚಿನ ವಿವರಗಳ ಮಾಹಿತಿಯನ್ನು ಓದಿ ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770004 ಹಾಗೂ ಜಿಲ್ಲಾ ಕಚೇರಿ ದೂ.ಸಂ: 8394796292 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕನಾಥೇಶ್ವರಿ ಅಮ್ಮನವರ ಜಾತ್ರೆ ಬಗ್ಗೆ ಮಾಹಿತಿ ಇಲ್ಲಿದೆ.ಖಾದರ್‌ ಭಾಷಾನನ್ನು ಭೀಕರವಾಗಿ ಹತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!ಕ್ಯಾಮರಾಮನ್​ಗೆ ಬಾಟೆಲ್ ಎಸೆದ ಮಹೇಂದ್ರ ಸಿಂಗ್ ಧೋನಿ!ಪತಂಜಲಿ ಪ್ರಕರಣದ ಜೊತೆಗೆ ಐಎಂಎ ವಿರುದ್ದ ಗರಂ ಆದ ಸುಪ್ರೀಂಕೋರ್ಟ್'ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಕೆ.ಪಿ.ನಂಜುಂಡಿಮಹಿಳೆಯ ಅತಿಯಾದ ಕಾಮದಾಹಕ್ಕೆ ಅಂತ್ಯ ಹಾಡಿದ ಯುವಕ..!ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!