ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ
ಚಿತ್ರದುರ್ಗ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ 20 ರಿಂದ 40 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2024ರ ಆಗಸ್ಟ್ 17 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಎನ್.ಕರಿಯಪ್ಪ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.