LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೆನ್‌ಡ್ರೈವ್‌ ಪ್ರಕರಣ: ಕಾರ್ತಿಕ್, ದೇವರಾಜೇಗೌಡಗೆ ವಿಚಾರಣೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ.

ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್ ಮತ್ತು ದೇವರಾಜೇಗೌಡಗೆ ನೋಟಿಸ್ ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್‌ಗೌಡ ಹಾಗೂ ಚೇತನ್‌ಗೌಡ ವಿರುದ್ಧ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ.ಪ್ರಕರಣ ಸಂಬಂಧ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ನೋಟಿಸ್ ನೀಡಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ತನಿಖೆ ನಂತರ ಪೆನ್‌ಡ್ರೈವ್‌ನ ಸತ್ಯಾಸತ್ಯತೆ ಹೊರ ಬೀಳುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ.!ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿಚಿಗಟೇರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಲಹಾ ಸಮಿತಿಗೆ ಸದಸ್ಯರುಗಳ ಆಯ್ಕೆವಚನ- ---ಭೋಗಣ್ಣ     .!'ಅಭಿವೃದ್ಧಿದಾಯಕ ಭಾರತ ನಿರ್ಮಿಸಲು ಮಹಿಳೆಯರ ಆಶೀರ್ವಾದ ನನಗೆ ಸ್ಫೂರ್ತಿ' - ಪ್ರಧಾನಿ ಮೋದಿನಾಳೆ ಅ.20ರಂದು ಈ ವಾರ್ಡ್ ಗಳಲ್ಲಿ ವಿದ್ಯುತ್ ಇರಲ್ಲ.!ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ | CM Siddaramaiahಗಡ್ಡ ಇಲ್ಲದ ಗೆಳೆಯ ಬೇಕು, ‘ಗಡ್ಡ ತೆಗೆಯಿರಿ, ಪ್ರೀತಿ ಉಳಿಸಿ’ ಎಂಬ ಘೋಷಣೆಯೊಂದಿಗೆ ಯುವತಿಯರ ಪ್ರತಿಭಟನೆಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿ: ಹೆಚ್.ಡಿಕೆ.!ಭೋವಿ ನಿಗಮದಲ್ಲಿ ಹಗರಣಕ್ಕೆ ನಮ್ಮದೇನು ಪಾತ್ರವಿಲ್ಲ.! MLC ಸುನೀಲ್ ವಲ್ಯಾಪುರೆ ಸ್ಪಷ್ಟನೆ