LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೆನ್‌ಡ್ರೈವ್ ಹಂಚಿದ ಪ್ರೀತಮ್‌ ಗೌಡ ಜೊತೆ ನಾನು ಪಾದಯಾತ್ರೆ ಮಾಡಲ್ಲ - ಸಿಡಿದೆದ್ದ ಕುಮಾರಸ್ವಾಮಿ

ನವದೆಹಲಿ: ಅಶ್ಲೀಲ ಪೆನ್‌ಡ್ರೈವ್ ಹಂಚಿಕೆ ಮಾಡಿ ನಮ್ಮ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಮ್‌ ಗೌಡನನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ಬಿಜೆಪಿಯವರು ಈ ಪಾದಯಾತ್ರೆಗೆ ನನ್ನನ್ನು ಕರೆಯುತ್ತೀರಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶಿತರಾಗಿದ್ದಾರೆ. ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರಿಗೆ ಜಂಟಿಯಾಗಿ ಪಾದಯಾತ್ರೆ ಮಾಡಲಿದೆ ಎನ್ನಲಾಗಿತ್ತು. ಈ ಪಾದಯಾತ್ರೆಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಮಾಜಿ ಶಾಸಕ ಪ್ರೀತಮ್‌ ಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನ ಸಭೆ ಕರೆಯುತ್ತೀರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ ಎಂದು ಕೇಳಿರುವ ಹೆಚ್‌ಡಿಕೆ ಪಾದಯಾತ್ರೆ ಸಂಘಟಿಸಿದ ಬಿಜೆಪಿ ನಾಯಕರ ವಿರುದ್ದ ಎಚ್‌ಡಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ನೂರಾರು ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲೂ ಮಳೆಯಿಂದ ಹಲವು ಜಿಲ್ಲೆಗಳು ಜಲಾವೃತಗೊಂಡಿವೆ. ಮಂಡ್ಯ ಭಾಗದಲ್ಲಿ ನಾಟಿ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ಜಿ.ಟಿ ದೇವಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ