LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೊಲೀಸ್ ವಾಹನದಲ್ಲಿ ಗಣಪತಿ ಮೂರ್ತಿಯನ್ನ ಕೊಂಡೊಯ್ದ ಕ್ರಮಕ್ಕೆ ವಿಜಯೇಂದ್ರ ಕಿಡಿ..!

ಬೆಂಗಳೂರು: ನಿನ್ನೆ ಟೌನ್ ಹಾಲ್‌ನಲ್ಲಿ ನಾಗಮಂಗಲ ಘಟನೆ ಸಂಬಂಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಅಲ್ಲಿಗೆ ತಂದಿದ್ದ ಗಣೇಶ ಮೂರ್ತಿಯನ್ನು ಪ್ರತಿಭಟನಾಕಾರರ ಜೊತೆ ಪೊಲೀಸ್ ವಾಹನದಲ್ಲಿ ಕೊಂಡೊಯ್ದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ ಕಾರಿದ್ದಾರೆ. ಇದು ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ X ಖಾತೆಯಲ್ಲಿ ಇದರ ಬಗ್ಗೆ ಟೀಕಿಸಿರುವ ವಿಜಯೇಂದ್ರ, ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ ಎಲ್ಲಿಲ್ಲದ ಮಹತ್ವ ಎಂದು ಕಿಡಿಕಾರಿದ್ದಾರೆ. ಜನರ ಭಾವೊದ್ವೇಗಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಾರದು ಎಂಬುದನ್ನು ಒಪ್ಪಬಹುದಾದರೂ ಅದರ ಹೆಸರಿನಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವ ಮಾರ್ಗಸೂಚಿಗಳನ್ನು ಅಳವಡಿಸಿ ಉತ್ಸವ ಆಚರಣೆಯ ಸಡಗರದ ಸ್ವಾತಂತ್ರ್ಯಕ್ಕೆ ತೊಂದರೆ ನೀಡುವುದನ್ನು ಒಪ್ಪಲಾಗದು ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸುವ ಮಾರ್ಗಸೂಚಿಗಳು ಉದ್ದೇಶಪೂರ್ವಕ ಎಂಬ ಭಾವನೆ ಹಿಂದೂ ಸಮಾಜದಲ್ಲಿ ಬಲವಾಗಿ ಬೇರೂರಿದೆ ಇದಕ್ಕೆ ನಾಗಮಂಗಲದಂತಹ ಘಟನೆ ಸಾಕ್ಷಿಯಾಗಿದೆ, ದುರ್ಘಟನೆ ಉದ್ಭವಿಸುವುದಕ್ಕೆ ಆಸ್ಪದ ನೀಡುವ ನಿಟ್ಟಿನಲ್ಲಿ ಉತ್ಸವ ವಿರೋಧಿ ದುಷ್ಟ ಗುಂಪುಗಳು ಗಣೇಶ ಮೆರವಣಿಗೆ ಸಂದರ್ಭದಲ್ಲಿ ದಾಂಧಲೆ ನಡೆಸಿ ಅಟ್ಟಹಾಸ ಮೆರೆಯುವ ಪರಿಸ್ಥಿತಿಯ ಸೃಷ್ಟಿಗೆ ಕಾನೂನು ಸುವ್ಯವಸ್ಥೆಯ ನಿಷ್ಕ್ರೀಯತೆ ಅವಕಾಶ ಮಾಡಿಕೊಡುತ್ತಿದೆ ಎಂದಿದ್ದಾರೆ. ಈ ಸಂಬಂಧವಾಗಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ 'ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು' ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿ ಸರ್ವಥಾ ಖಂಡನೀಯ, ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ಬಗ್ಗೆ ತೋರುವ ತಾತ್ಸಾರ ದೋರಣೆಯನ್ನು ಈ ಘಟನೆ ಪ್ರತಿಬಿಂಬಿಸಿದೆ, ಈ ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆ