LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ ಎಳನೀರು: ನೀವು ತಿಳಿಯಲೇಬೇಕಾದ ಆರೋಗ್ಯ ಪ್ರಯೋಜನಗಳು...

ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

ವರ್ಷದ ಎಲ್ಲಾ ದಿನಗಳಲ್ಲೂ ಸಿಗುವ ಎಳನೀರಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಪ್ರತೀನಿತ್ಯ ಒಂದೊಂದು ಎಳನೀರು ಕುಡಿಯುವ ಅಭ್ಯಾಸವಿಟ್ಟುಕೊಂಡರೆ, ದೇಹಕ್ಕೆ ಎದುರಾಗುವ ಸಾಕಷ್ಟು ರೋಗಗಳಿಂದ ದೂರ ಇರಬಹುದು. ನವಿರಾದ ಸಿಹಿ, ನೀರಿನಷ್ಟೇ ಗಾಢವಾದ ಎಳನೀರು ದೇಹಕ್ಕೆ ಅಗತ್ಯವಾದ ಬಹಳಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಎಳನೀರಿನಿಂದ ಸಿಗುವ ಪೋಷಕಾಂಶಗಳಿಂದ ದೇಹ ಶೀಘ್ರ ತನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತದೆ.

ಎಳನೀರಿನಲ್ಲಿರುವ ವಿವಿಧ ಖನಿಜ, ಸಕ್ಕರೆ ಹಾಗೂ ಲವಣಾಂಶ ಅಗತ್ಯ ಪ್ರಮಾಣದಲ್ಲಿ ಇರುವುದರಿಂದಲೇ ಇದೊಂದು ಅಮೃತಪಾನವಾಗಿದೆ. ಬೇಸಿಗೆ ತಾಪವನ್ನು ನೇರವಾಗಿ ನೀಗಿಸಬಲ್ಲ ಎಳನೀರು ದೈವದತ್ತವಾದುದು. ಸರ್ವರೋಗಕ್ಕೂ ಮದ್ದಾಗಿರುವ ಎಳನೀರಿನ ಕೆಲ ಉಪಯೋಗಗಳನ್ನು ಇಲ್ಲಿ ಇಲ್ಲಿವೆ..

ನಿಶಕ್ತಿಗೆ ಎಳನೀರು ಅತ್ಯುತ್ತಮ ಆಯ್ಕೆ, ಪ್ರತಿದಿನ ಎಳನೀರನ್ನು ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದಲ್ಲದೆ, ನವ ಚೈತನ್ಯ ಇರುತ್ತದೆ.

  • ಅಜೀರ್ಣ ಮತ್ತು ಹೊಟ್ಟೆನೋವು ಸಂಬಂದಿತ ಸಮಸ್ಯೆಗಳಿಗೆ ಎಳನೀರು ಒಳ್ಳೆಯ ಆರೋಗ್ಯ ಪರಿಣಾಮ ನೀಡುತ್ತದೆ. ಪ್ರತಿದಿನ ಎಳನೀರು ಸೇವಿಸಿದರೆ ಅಜೀರ್ಣ ಸಮಸ್ಯೆ ಮತ್ತು ಹೊಟ್ಟೆ ನೋವು ನಿವಾರಣೆ ಆಗುತ್ತದೆ.

  • ಎಳನೀರು ಕೇವಲ ಆರೋಗ್ಯ ಪ್ರಯೋಜನೆಗಳನ್ನು ಮಾತ್ರ ಹೊಂದಿಲ್ಲ, ಇದು ಚರ್ಮಕ್ಕೂ ಅಷ್ಟೇ ಉತ್ತಮ ಪರಿಹಾರಗಳನ್ನು ನೀಡುತ್ತದೆ, ಸುಕ್ಕುಗಟ್ಟಿದ ಚರ್ಮವನ್ನು ಎಳನೀರಿನಿಂದ ತೊಳೆದರೆ ಚರ್ಮದ ಸುಕ್ಕು ನಿವಾರಣೆಯಾಗುತ್ತದೆ.

  • ಎಳನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮತ್ತು ಮಧುಮೇಹ ರೋಗಲಕ್ಷಣಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

  • ಎಳನೀರಿನಲ್ಲಿರುವ ವಿವಿಧ ವಿಟಮಿನ್ ಮತ್ತು ವಿಶೇಷವಾಗಿ ವಿಟಮಿನ್ ಕೆ ಮತ್ತು ಕಬ್ಬಿಣದ ಅಂಶ ಕೂದಲಿಗೆ ಸಹಕಾರಿಯಾಗಿದೆ. ಕೂದಲನ್ನು ಕೊಂಚ ಎಳನೀರಿನಿಂದ ಮಸಾಜ್ ಮಾಡುವುದರಿಂದ ತಲೆಯ ಚರ್ಮದಲ್ಲಿ ರಕ್ತಸಂಚಾರ ಹೆಚ್ಚುತ್ತದೆ. ಇದರ ಪರಿಣಾಮ ಕೂದಲ ಬುಡ ಹೆಚ್ಚು ಶಕ್ತಿಯುತವಾಗುತ್ತವೆ. ಕೂದಲು ಉದುರುವುದು ಕಡಿಮೆಯಾಗಿ ಕೂದಲ ಹೊಳಪು ಹೆಚ್ಚುತ್ತದೆ. ಕೂದಲು ಮೃದುವಾಗಿಸುವಲ್ಲಿ ಕೂಡಾ ಸಹಾಯ ಮಾಡುತ್ತದೆ.

  • ಮುಖದ ಮೇಲೆ ಹೊಳಪನ್ನು ಕಾಪಾಡಿಕೊಳ್ಳಲು ಎಳನೀರು ಸಹಾಯ ಮಾಡುತ್ತದೆ. ನಿರ್ಜಲೀಕರಣವು ಚರ್ಮವನ್ನು ಹಾನಿಯುಂಟು ಮಾಡುತ್ತದೆ. ಜೊತೆಗೆ ನಿಮ್ಮ ಮುಖದಲ್ಲಿ ಮೊಡವೆ ಉಂಟಾಗಲು ಕಾರಣವಾಗುತ್ತದೆ. ಎಳನೀರು ದೇಹಕ್ಕೆ ತೇವಾಂಶವನ್ನು ನೀಡುವುದರಿಂದ ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

  • ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು, ಮೂತ್ರನಾಳದ ಸೋಂಕಿನಿಂದ ನಿಮಗೆ ರಕ್ಷಣೆಯನ್ನು ನೀಡುತ್ತದೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯ