LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣಗೆ ಸಂಕಷ್ಟ: ಅರೆಸ್ಟ್ ವಾರೆಂಟ್‌ಗೆ ಎಸ್‌ಐಟಿಗೆ ಕೋರ್ಟ್‌ ಅನುಮತಿ

ಬೆಂಗಳೂರು: ಪೆನ್‌ಡ್ರೈವ್ ಕೇಸಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಹೊಳೆನರಸೀಪುರ ಕೇಸಲ್ಲಿ ಪಾಸ್‌ಪೋರ್ಟ್‌ ರದ್ದು ಮಾಡಲು ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ಅರೆಸ್ಟ್ ವಾರೆಂಟ್‌ಗೆ ಎಸ್‌ಐಟಿಗೆ ಅನುಮತಿ ಪಡೆದಿದೆ.

ಎಸ್‌ಐಟಿಗೂ ಸಿಗದೇ ತಲೆಮರೆಸಿಕೊಂಡಿರುವ ಪ್ರಜ್ವಲ್ ವಿದೇಶದಲ್ಲೇ ವಾಸ್ತವ್ಯ ಹೂಡಿದ್ದಾರೆ. ಭೂಗತವಾಗೇ ಇದ್ದು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಾಗಾಗಿ ಏನೇ ಆಗಲಿ ಪ್ರಜ್ವಲ್‌ನನ್ನು ಬಂಧಿಸಲೇಬೇಕು ಎಂದು ಎಸ್‌ಐಟಿ ಪಣ ತೊಟ್ಟಿದೆ.

ಅದರಂತೆ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಎಸ್‌ಐಟಿ ಮಾಹಿತಿ ನೀಡಿದೆ. ಇದೀಗ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್‌ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಇದೀಗ ಅರೆಸ್ಟ್ ವಾರೆಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ: ಬಸ್ ಮಾಲೀಕರಿಗೆ ಕೇಸ್ ದಾಖಲು .!ಇಂದಿನಿಂದ ನಾಲ್ಕು ದಿನ ಏರಿಯಾಗಳಲ್ಲಿ ಕರೆಂಟ್ ಇರಲ್ಲ.! ನಿಮ್ಮ ಏರಿಯಾ ಸೇರಿದೆಯ ಚಕ್ ಮಾಡಿ.!ದೀಪಾವಳಿ ಹಬ್ಬದಲ್ಲಿ ಪಟಾಕಿ ಎಷ್ಟು ಹೊತ್ತು ಸಿಡಿಸಬೇಕು.? ಸಿಎಂವಚನ- -ಮೋಳಿಗೆ ಮಹಾದೇವಿ .!ರೈತರು ಕುಲಾಂತರ ಬೀಜಗಳ ವಿರುದ್ಧ ಹೋರಾಟಕ್ಕೆ ಸಜ್ಜು.! ಚಾಮರಸ ಮಾಲಿಪಾಟೀಲ.!ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ನ್ಯೂಝಿಲೆಂಡ್: 12 ವರ್ಷಗಳ ಬಳಿಕ ತವರಿನಲ್ಲಿ ಭಾರತಕ್ಕೆ ಸೋಲು..!ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ'ಸತೀಶ್ ಸೈಲ್‌ಗೆ 7 ವರ್ಷ ಜೈಲು : ಕೋರ್ಟ್ ಆದೇಶ ಕೇಳಿ ನನಗೆ ಶಾಕ್'- ಡಿಕೆಶಿ'ಹಣದ ಮೂಟೆ ಇಟ್ಟುಕೊಂಡು ಕಾಂಗ್ರೆಸ್‌ ಉಪ ಚುನಾವಣೆ ಎದುರಿಸಲು ಸಿದ್ಧತೆ'- ವಿಜಯೇಂದ್ರಬೆಲೆಕೇರಿ ಅದಿರು ನಾಪತ್ತೆ ಪ್ರಕರಣ ಶಾಸಕ ಸತೀಶ್ ಸೈಲ್ ಜೈಲ್.! ನಿವೃತ್ತ ನ್ಯಾ. ಸಂತೋಷ್ ಹೆಗಡೆ ಹೇಳಿದ್ದು ಹೀಗೆ.!