LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್‌ ರೇವಣ್ಣ ಜಾಮೀನು ವಜಾ..!

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಪರ ವಕೀಲ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್‌ ಅವರಿದ್ದ ಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಂಸದ ಎಸ್‌ಐಟಿ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ, ಸಿಐಡಿಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರೂ ಆರೋಪಿಗಳಾಗಿರುವ ಪ್ರಕರಣವಿದು. ಈಗಾಗಲೇ ಹೆಚ್.ಡಿ.ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಮೊದಲು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿತ್ತು. ನಂತರ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ