ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲೇ ಯಾಕೆ ಕ್ರಮ ಕೈಗೊಂಡಿಲ್ಲ: ನಿರ್ಮಲಾ ಸೀತಾರಾಮನ್
ದೆಹಲಿ: ಪ್ರಜ್ವಲ್ ರೇವಣ್ಣ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಒಂದು ವರ್ಷದ ಹಿಂದೆಯೇ ಗೊತ್ತಿದ್ದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ. '
ಕಾಂಗ್ರೆಸ್ ಸರ್ಕಾರ ಒಕ್ಕಲಿಗ ಮತಗಳನ್ನು ಕಳೆದುಕೊಳ್ಳಬಹುದೆಂಬ ಭಯದಲ್ಲಿ ಕರ್ನಾಟಕದ ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿಯುವವರೆಗೂ ಮೌನ ವಹಿಸಿದೆ. ಆದರೆ ಈಗ ಅದನ್ನೇ ದೊಡ್ಡ ಸುದ್ದಿ ಎಂಬಂತೆ ಬಿಂಬಿಸುತ್ತಿದೆ' ಎಂದು ಟೀಕಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.