LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಹಾಸನ: ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಇನ್ನಷ್ಟು ಸಂಕಷ್ಟ ಎದುರಾಗಿದ್ದು ಅವರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಈ ಅತ್ಯಾಚಾರ ಪ್ರಕರಣಕ್ಕೂ ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ ನಂಟಿದೆ ಎನ್ನಲಾಗಿದೆ. ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಆಕೆಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಬಳಿಕ ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಕೂಡ ನಡೆಸಲಾಗಿದೆ. ಸಂತ್ರಸ್ತೆ ಗನ್ನಿಕಡದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಮರಳಿ ಭಾರತಕ್ಕೆ ಕರೆತಂದು ಬಂಧಿಸುವ ವಿಚಾರವಾಗಿ ವಿಶೇಷ ತನಿಖಾ ತಂಡ(ಎಸ್ ಐಟಿ) ಕಾರ್ಯ ಪ್ರವೃತ್ತವಾಗಿದೆ. ಮಹಿಳೆಯ ಅಪಹರಣ ಪ್ರಕರಣದ ಆರೋಪಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಈಗಾಗಲೇ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ಮುಂದುವರೆದಿದೆ. ರೇವಣ್ಣರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10th, 12th ಪಾಸ್ ಆದವರಿಗೆ Airport ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಆಸ್ಪತ್ರೆಯಲ್ಲಿ ದರ್ಶನ್‌ ಬಳಿ ಬಂದ ಅಭಿಮಾನಿ ಮಾಡಿದ್ದೇನು? ದಾಸ ಸಿಟ್ಟಾಗಿದ್ದೇಕೆ?ಒಂದೇ ಕುಟುಂಬದಲ್ಲಿ ತಾಯಿ, ಇಬ್ಬರೂ ಪುತ್ರಿಯರೂ ಕೂಡ ಐಎಎಸ್‌ ಅಧಿಕಾರಿಯಾದ ಯಶೋಗಾಥೆನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳುಮುಸ್ಲಿಂ ಪರುಷರು ಎಷ್ಟು ಮದುವೆ ಆಗಬಹುದು.? ಬಾಂಬೆ ಹೈಕೋರ್ಟ್ ಹೇಳಿದ್ದೇನು.?ಗ್ರೂಪ್-ಎ ಸಹಾಯಕ ಹಾಗೂ ಗ್ರೂಪ್-ಬಿ ಗೆ ಪರೀಕ್ಷೆ ಬರೆದವರಿಗೆ ಇಲ್ಲಿದೆ ಮುಖ್ಯ ಮಾಹಿತಿ.!10 ನೇ ಕ್ಲಾಸ್ ಪಾಸಾದವರು ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.!ವಚನ- -ಗುಪ್ತ ಮಂಚಣ್ಣ .!ಸತತ ಮಳೆಯಿಂದಾಗಿ ಬೆಂ.ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್ಸಂಡೂರಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ..!