LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಧಾನಿ ಮೋದಿ ನೋಡಲು ಸಾಮಾನ್ಯ ಜನರಂತೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ಮುಖಂಡರು…!!

ಬೆಂಗಳೂರು : ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು, ಪ್ರತಿ ಭಾರಿ ಪಿಎಂ ಬಂದಾಗ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಈ ಬಾರಿ ಭೇಟಿ ಗೆ ಅವಕಾಶ ಸಿಗದ ಹಿನ್ನಲೆ ರಸ್ತೆಯಲ್ಲಿ ಬ್ಯಾರಿಕೇಡ್ ಹೊರಗಡೆ ಸಾರ್ವಜನಿಕರಂತೆ ನಿಂತು ಮೋದಿಗೆ ಕೈಬೀಸಿದ ಘಟನೆ ನಡೆದಿದ್ದು, ಸದ್ಯ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಮುನಿರತ್ನ, ಕೆ. ಗೋಪಾಲಯ್ಯ , ಆರ್‌ ಅಶೋಕ್ ಕಾಣಿಸಿಕೊಂಡಿದ್ದಾರೆ. ನಾಲ್ವರು ಮುಖಂಡರು ಬ್ಯಾರಿಕೇಡ್ ಆಚೆ ನಿಂತು ಪ್ರಧಾನಿ ಮೋದಿಗೆ ಕೈ ಬೀಸಿದ್ದಾರೆ. ಅದರಲ್ಲೂ ಮುನಿರತ್ನ ಬ್ಯಾರಿಕೇಡ್ ಮೇಲೆ ಹೆಜ್ಜೆ ಇಟ್ಟು ಪ್ರಧಾನಿಗೆ ಕೈ ಬೀಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ.

ಈ ಪೋಟೋ ಕುರಿತಂತೆ ಕಾಂಗ್ರೇಸ್ ವ್ಯಂಗ್ಯವಾಡಿದ್ದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಟ್ವೀಟ್ ಮೂಲಕ ಟೀಕೆ ವ್ಯಕ್ತಪಡಿಸಿದ್ದಾರೆ. ಹಲವಾರು ನೆಟ್ಟಿಗರು ಬಿಜೆಪಿ ಮುಖಂಡರಿಗೆ ಈ ರಿತಿ ಪರಿಸ್ಥಿತಿ ಬರಬಾರದಿತ್ತು ಅಂತ ಕಮೆಂಟ್ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ