LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವಾಸಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ; 14 ಮಂದಿ ಸಾವು, ಹಲವರಿಗೆ ಗಾಯ

ದಿಸ್ಪುರ: ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಮೃತಪಟ್ಟು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ.

ಬಸ್ಸಿನಲ್ಲಿ 45 ಮಂದಿ ಪ್ರವಾಸಿಗರು ಪ್ರಯಾಣಿಸುತ್ತಿದ್ದು, ಅವರೆಲ್ಲರೂ ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದರು. ದೇರ್ಗಾಂವ್ನಲ್ಲಿ ಈ ಪ್ರವಾಸಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರವಾಸಿ ಬಸ್ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಪ್ರವಾಸಿಗರನ್ನು ಹೊತ್ತು ಹೊರಟಿತ್ತು. ಈ ಸಂದರ್ಭ ಮಾರ್ಗರಿಟಾದಿಂದ ಕಲ್ಲಿದ್ದಲು ಹೇರಿಕೊಂಡು ಬರುತ್ತಿದ್ದ ಟ್ರಕ್ ಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಘಟನೆಯಲ್ಲಿ ಮೃತಪಟ್ಟ 14 ಪ್ರಯಾಣಿಕರ ಶವಗಳನ್ನು ಬಸ್ಸಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹಾಗೂ ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ'- ಅಮಿತ್‌ ಶಾಬಿಬಿಎಂಪಿ ಅಧಿಕಾರಿಗಳಿಂದ ಮಹಾ ಎಡವಟ್ಟು - ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಎಂ ಬದಲು BSY ಫೋಟೋ ಬಳಕೆರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾಮೋದಿ 3.02 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆBreaking News: ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್..!ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆ ಶೇ.25 ದುಬಾರಿಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?