E-PAPER
17 Nov 2026, 12:23:16 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು

ಬೆಂಗಳೂರು-29: ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಈ ಬಾರಿ ಅವಧಿಗೂ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿ ಬಿದ್ದಿದೆ. ಜನವರಿಯಿಂದ ಈವರೆಗೆ ವಾಡಿಕೆಯಂತೆ 177.4 ಮಿ.ಮೀ ಮಳೆಯಾಗಬೇಕಿತ್ತು. ಈ ಬಾರಿ 801.7 ಮಿ.ಮೀ ಅಂದರೆ ಮೂರು ಪಟ್ಟು ಹೆಚ್ಚು ಮಳೆಯಾಗಿದೆ. ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ಅತಿವೃಷ್ಠಿ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾಗಿರುವ ಎಲ್ಲಾ ರೀತಿಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಂಟ್ರೋಲ್ ರೂಂಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಯಾವುದೇ ಮಳೆಹಾನಿ ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಬೇಕು. ಅತಿವೃಷ್ಠಿಯಿಂದ ತೊಂದರೆಗೊಳಗಾದವರಿಗೆ ಪರಿಹಾರವನ್ನು ಸಹ ತ್ವರಿತವಾಗಿ ನೀಡಬೇಕು ಎಂದು ಸಚಿವರು ಆದೇಶಿಸಿದರು. ‌

ವರಾಹಿ ಜಲಾಶಯದ ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ಮಾಹಿತಿ ಆಗಿಂದಾಗ್ಗೆ ಪಡೆಯುತ್ತಿರಬೇಕು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಮುಂಚಿತವಾಗಿಯೇ ತಿಳಿಸಿ, ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು. ಇದರಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರಿಗೆ ಕಡಲ ತೀರದಲ್ಲಿ ಹಾಗೂ ಹಳ್ಳ, ಕೊಳ್ಳ, ಜಲಪಾತಗಳ ಬಗ್ಗೆ ಅರಿವಿಲ್ಲದೇ ಪ್ರಾಣಹಾನಿ ಪ್ರಕರಣಗಳು ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಸಾರ್ವನಿಕರಿಗೆ ಮುನ್ಸೂಚನೆ ನೀಡುವ ಫಲಕಗಳನ್ನು ಅಳವಡಿಸಬೇಕು. ಸಾಧ್ಯವಾದಲ್ಲಿ ಅಂತಹ ಸ್ಥಳಗಳಲ್ಲಿ ಸಿಬ್ಬಂದಿ ನಿಯೋಜನೆಯನ್ನು ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ಗಡಿಭಾಗದ ಸಮೀಪ ಸಹ ಸಣ್ಣ-ಪುಟ್ಟ ಪ್ರಕರಣಗಳು ಆಗಿರುವುದು ಕೇಳಿಬರುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿರುವಂತೆ ಕ್ರಮ ವಹಿಸಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗದ ಹಾಗೆ ಎಚ್ಚರವಹಿಸಬೇಕು ಎಂದು ಆದೇಶಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೇಂದ್ರ ಸ್ಥಾನಗಳಲ್ಲಿದ್ದು, ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಲು ಕಾರ್ಯಪ್ರವೃತ್ತರಾಗಿರಬೇಕು. ಜನಸಾಮಾನ್ಯರಿಗೆ ಸ್ಪಂದಿಸಲು ಅನುಕೂಲವಾಗುವ ಹಾಗೆ ತಮ್ಮ ಮೊಬೈಲ್ ಅನ್ನು ದಿನದ ಇಪ್ಪತ್ತನಾಲ್ಕು ಗಂಟೆಯೂ ಸಕ್ರೀಯವಾಗಿ ಇಟ್ಟುಕೊಂಡು ದೂರು ಬಂದಾಗ ಕೂಡಲೇ ಸ್ಪಂದಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್.ಕೆ, ಡಿ.ಎಫ್.ಓ ಗಣಪತಿ, ಉಪ ವಿಭಾಗಾಧಿಕಾರಿ ರಶ್ಮಿ.ಎಸ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.