LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಿಯತಮೆಯ ತಂದೆಗೆ ಗುಂಡಿಕ್ಕಿದ್ದ ಯುವಕ; ಕಾರಣ ಏನು ಗೊತ್ತಾ!?

ಹೈದರಾಬಾದ್:‌ ಪ್ರಿಯತಮೆಯನ್ನು ವಿದೇಶಕ್ಕೆ ಕಳುಹಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಆಕೆಯ ತಂದೆಯ ಮೇಲೆ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಹೈದರಬಾದ್‌ನಲ್ಲಿ ನಡೆದಿದೆ.

ಆರೋಪಿ ಬಲ್ವಿಂದರ್ ಸಿಂಗ್ (25) ನನ್ನು ಬಂಧಿಸಲಾಗಿದೆ.

‘ಬಲ್ವಿಂದರ್ ತನ್ನ ಮಗಳಿಗೆ ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದಾನೆ ಮತ್ತು ಈ ವಿಷಯದ ಬಗ್ಗೆ ಇತ್ತೀಚೆಗೆ ತನ್ನೊಂದಿಗೆ ಜಗಳವಾಡಿದ್ದಾನೆ. ಇದಕ್ಕಾಗಿ ನಾನು ಮಗಳನ್ನು ಯುಎಸ್‌ ಗೆ ಕಳುಹಿಸಿದ್ದೇನೆ’ ಎಂದು ಯುವತಿಯ ತಂದೆ ದೂರಿನಲ್ಲಿ ಹೇಳಿದ್ದಾರೆ.

ಬಲ್ವಿಂದರ್ ಸಿಂಗ್ ಮತ್ತು ಯುವತಿ ಒಂದೇ ತರಗತಿಯಲ್ಲಿ ಓದುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧ ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಮಗಳನ್ನು ಆತನಿಂದ ದೂರವಿಡಬೇಕೆನ್ನುವ ಉದ್ದೇಶದಿಂದ ಆಕೆಯನ್ನು ವಿದೇಶಕ್ಕೆ ಕಳುಹಿಸಿದ್ದರು.

ಈ ವಿಚಾರದಿಂದ ಸಿಟ್ಟಿಗೆದ್ದಿದ್ದ ಬಲ್ವಿಂದರ್‌ ಭಾನುವಾರ (ನ.10ರಂದು) ಏರ್‌ಗನ್‌ ಹಿಡಿದುಕೊಂಡು ಅಪಾರ್ಟ್ಮೆಂಟ್ ಗೆ ನುಗ್ಗಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಬಲ್ವಿಂದರ್‌ ಸಿಟ್ಟಿನಿಂದ ಯುವತಿಯ ತಂದೆಯ ಮೇಲೆ ಗುಂಡು ಹಾರಿಸಿ ಪರಾರಿ ಆಗಿದ್ದಾನೆ. ಪರಿಣಾಮ ವ್ಯಕ್ತಿಯ ಬಲ ಕಣ್ಣಿಗೆ ಗಾಯವಾಗಿದೆ.

ಸದ್ಯ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಬಲ್ವಿಂದರ್‌ ವಿರುದ್ಧ ಸರೂರ್ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 109 (ಕೊಲೆ ಯತ್ನ) ಅಡಿಯಲ್ಲಿ ದೂರು ದಾಖಲಿಸಿ ಬಂಧಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!