LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರೇಯಸಿಯಿಂದ ಮೋಸ : ಕಾಲೇಜಿನ ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಇರಿದ ಪ್ರಿಯಕರ...!

ಮಂಗಳೂರು:  ಶಿಕ್ಷಣ ಕಾಶಿ ಎಂದೇ ಕರೆಯಿಸಿಕೊಂಡಿರುವ ಮೂಡಬಿದ್ರೆಯ ಹೆಸರಾಂತ ಕಾಲೇಜಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಇರಿದ ವಿಚಿತ್ರ ಘಟನೆ ನಡೆದಿದೆ.


ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.


ಸೋಮವಾರ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಆರೋಪಿ ಪೊಲೀಸರ ಅತಿಥಿಯಾಗಿದ್ದು, ಗಾಯಾಳು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಮೂಲದ ಮಂಜುನಾಥ್ ನಿಗೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ನಡುವೆ ಪ್ರೇಮಾಂಕುರವಾಗಿತ್ತು.




ವಿದ್ಯಾರ್ಥಿನಿ ಕೂಡ ತುಮಕೂರು ಮೂಲದವಳಾಗಿದ್ದು ಪಿಯುಸಿವರೆಗೆ ಇವರಿಬ್ಬರು ಜೊತೆಯಾಗಿಯೇ ಆಳ್ವಾಸ್ ನಲ್ಲಿ ಕಲಿಯುತ್ತಿದ್ದರು. ಹುಡುಗ ಆ ನಂತರ ಕಾಲೇಜು ಬಿಟ್ಟಿದ್ದು, ಈಕೆ ವಿದ್ಯಾಬ್ಯಾಸ ಮುಂದುವರಿಸಿದ್ದಳು. ಇವರ ನಡುವಿನ ಪ್ರೇಮದ ವಿಚಾರ ಹುಡುಗಿ ಮನೆಯವರಿಗೆ ತಿಳಿದಿದ್ದು ಆಕೆಯ ಬಳಿಯಿದ್ದ ಮೊಬೈಲ್ ವಶಪಡಿಸಿಕೊಂಡಿದ್ದರು ಎನ್ನಲಾಗಿದೆ.




ತನ್ನ ಪ್ರೀತಿ ಪ್ರೇಮ ಅರ್ಧದಲ್ಲೇ ಮೊಟಕುಗೊಂಡ ಹಿನ್ನೆಲೆಯಲ್ಲಿ ಪ್ರಿಯಕರ ಮಂಜುನಾಥ್ ವಿದ್ಯಾರ್ಥಿನಿ ವಿರುದ್ಧ ಸೇಡಿನ ಮನೋಭಾವ ಬೆಳೆಸಿಕೊಂಡಿದ್ದ. ತನ್ನ ಪ್ರೇಯಸಿಯ ಭೇಟಿಗಾಗಿ  ತುಮಕೂರಿನಿಂದ ನೇರ ಮೂಡಬಿದ್ರೆಗೆ ಬಂದು ಲಾಡ್ಜ್ ನಲ್ಲಿ ತಂಗಿದ್ದ.


ಈತನ ಭೇಟಿಗೆ ನಿರಾಕರಿಸಿದ ವಿದ್ಯಾರ್ಥಿನಿ ನಡೆಯಿಂದ ಕುಪಿತಗೊಂಡ ಮಂಜುನಾಥ್ ನೇರವಾಗಿ ತರಗತಿಗೆ ನುಗ್ಗಿ ಕತ್ತರಿಯಿಂದ ಇರಿದಿದ್ದಾನೆ. ಕೂಡಲೇ ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದು ಮೂಡಬಿದ್ರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಇರಿತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹದಿಹರೆಯದಲ್ಲಿ ನಡೆಯುವ ಹುಚ್ಚು ಪ್ರೀತಿ, ಪ್ರೇಮ ಯಾವ ಹಂತಕ್ಕೆ ತಲುಪುತ್ತಿದೆ ಅನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲು