ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಡೆಯುವ ಗೃಹಾಧಾರಿತ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 93 ಮಕ್ಕಳಿಗೆ ಫಿಜಿಯೋಥೆರಪಿಸ್ಟ್ ಸೇವೆ ಪಡೆಯಲು ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಿದೆ. ಜೂನ್ 29 ಅರ್ಜಿ ಸಲ್ಲಿಸಲು ಕೊನೆಯ ದಿನ.
ಡಿ.ಪಿ.ಟಿ, ಬಿ.ಪಿ.ಟಿ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಇದೇ ಜೂನ್ 29ರೊಳಗೆ ಅರ್ಜಿಗಳನ್ನು ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣ ಬಿ.ಆರ್.ಸಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬಿ.ಐ.ಈ.ಆರ್.ಟಿ. ರಾಜಣ್ಣ ಅವರ ದೂರವಾಣಿ ಸಂಖ್ಯೆ 9880608391 ಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.