LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಂಟ್ವಾಳ: ಓಮ್ನಿ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ - ಹಲವರಿಗೆ ಗಂಭೀರ ಗಾಯ

ಬಂಟ್ವಾಳ: ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ.

ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.

https://bcsuddi.com/%e0%b2%ae%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%ae%e0%b3%81%e0%b2%b3%e0%b2%bf%e0%b2%b9%e0%b2%bf%e0%b2%a4%e0%b3%8d%e0%b2%b2%e0%b3%81%e0%b2%b5%e0%b2%bf%e0%b2%a8%e0%b2%b2%e0%b3%8d/

ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿಯ ರಭಸಕ್ಕೆ ಒಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಭೇಟಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST