ಬೆಂಗಳೂರು: ನಗರದ ವಿವಿಧ ಎಲಿವೇಟೆಡ್ ಕಾರಿಡಾರ್‌ಗಳು ಹಾಗೂ ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ವಾಹನಗಳ ಸುಗಮ ಸಂಚಾರ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೆಲವು ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಪ್ರಕಟಣೆಯಂತೆ ಸೆಪ್ಟೆಂಬರ್ 4, 2026ರಿಂದ ಬಿಬಿಎಂಪಿ ವ್ಯಾಪ್ತಿಯ ವಿವಿಧ ಎಲಿವೇಟೆಡ್ ಕಾರಿಡಾರ್‌ಗಳು, ಡಬಲ್ ಡೆಕ್ಕರ್ ಫ್ಲೈಓವರ್ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಈ ನಿರ್ಬಂಧ ಜಾರಿಗೆ ಬರಲಿದೆ.
ನಿರ್ಬಂಧದ ಪ್ರಮುಖ ವಿವರಗಳು:
ಭಾರಿ ಸರಕು ಸಾಗಣೆ ವಾಹನಗಳಿಗೆ ದಿನದ 24 ಗಂಟೆಯೂ ಸಂಚಾರ ನಿರ್ಬಂಧ.
ಇತರೆ ಸರಕು ಸಾಗಣೆ ವಾಹನಗಳು ಹಾಗೂ ಮೂರು ಚಕ್ರದ ಗೂಡ್ಸ್ ಆಟೋಗಳು ಬೆಳಗ್ಗೆ 7ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10 ಗಂಟೆಯವರೆಗೆ ಸಂಚರಿಸುವಂತಿಲ್ಲ.
ಡಬಲ್ ಡೆಕ್ಕರ್ ಫ್ಲೈಓವರ್ (ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡವರೆಗೆ) ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿರ್ಬಂಧ ಅನ್ವಯವಾಗಲಿದೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಸೂಚಿಸಲಾದ ಮಾರ್ಗಗಳಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಿಗೆ 24 ಗಂಟೆಯ ನಿರ್ಬಂಧವಿದ್ದು, ಇತರೆ ವಿಧದ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ಇರಲಿದೆ.
ನಿರ್ಬಂಧಿತ ಮಾರ್ಗಗಳಲ್ಲಿ ಪರ್ಯಾಯ ರಸ್ತೆಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
https://twitter.com/blrcitytraffic/status/2095509878672675301?s=20