LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಜೆಟ್ 2024: ಮಿತ್ರ ಪಕ್ಷಗಳಿಗೆ ಕೊಡುಗೆ - ಬಿಹಾರ, ಆಂಧ್ರಪ್ರದೇಶಕ್ಕೆ ನಿರ್ಮಲಾ ಬಂಪರ್ ಘೋಷಣೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ಎನ್‌ಡಿಎ ಸರ್ಕಾರದ ಅತಿ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

ಆಂಧ್ರಕ್ಕೆ ವಿಶೇಷ ನೆರವು ಘೋಷಣೆ ಮಾಡಲಾಗಿದ್ದು ಈ ವರ್ಷ 15 ಸಾವಿರ ಕೋಟಿ ರುಪಾಯಿ ವಿಶೇಷ ಅನುದಾನವನ್ನು ಆಂಧ್ರ ಮರು ನಿರ್ಮಾಣಕ್ಕೆ ನೀಡಲಾಗಿದೆ. ಇನ್ನು ವಿಶಾಖ ಪಟ್ಟಣಂ-ಚೆನ್ನೈ ಕೈಗಾರಿಕಾ ಕಾರಿಡಾರ್​ ಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಜೆಡಿಯ ನಾಯಕ ನಿತೀಶ್ ಕುಮಾರ್ ಆಡಳಿತವಿರುವ ಬಿಹಾರ ಸರ್ಕಾರದ ಬೇಡಿಕೆಯಾದ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳಿಂದ ಬಾಹ್ಯ ನೆರವು, ಬಿಹಾರಕ್ಕೆ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಕ್ರೀಡಾ ಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 26 ಸಾವಿರ ಕೋಟಿ ರೂ ಹಂಚಿಕೆ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಫೆ. 17 ರಂದು “ಕಿಲಾರಿ ಕಲರವ” ವಿಚಾರ ಸಂಕಿರಣತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!ನಾಳೆಯಿಂದ ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ ಪ್ರಾರಂಭ.! ರೇಟ್ ಇಂತಿದೆ.!ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶ