LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬರಪೀಡಿತ ತಾಲೂಕುಗಳ ಘೋಷಣೆ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆ

ಕೋಲಾರ: ರಾಜ್ಯದಲ್ಲಿ ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ಬರ ಪೀಡಿತ ತಾಲ್ಲೂಕು ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 18 ರಂದು ಸುಮಾರು 113 ತಾಲ್ಲೂಕುಗಳನ್ನು ತಾತ್ಕಾಲಿಕ ಬರಪೀಡಿತ ಎಂದು ಪಟ್ಟಿ ಮಾಡಿಕೊಂಡಿದ್ದೇವೆ. ಆಗಸ್ಟ್ 31 ರಂದು ಸುಮಾರು 75 ತಾಲ್ಲೂಕು ಗಳ ಪಟ್ಟಿ ಸಿದ್ದ ಮಾಡಿದ್ದೇವೆ. ಯಾವ ತಾಲ್ಲೂಕು ಅರ್ಹವಾಗುತ್ತವೆ ಎಂಬುದನ್ನು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು, ಅವಶ್ಯವಿದ್ದರೆ ಸಚಿವ ಸಂಪುಟದ ಗಮನಕ್ಕೂ ತರಲಾಗುವುದು ಎಂದರು.

ಆಯಾಯ ತಾಲ್ಲೂಕು ಬೆಳೆ ಸಮೀಕ್ಷೆ ನಡೆಸಿ ಅದರ ಆಧಾರದ ಮೇಲೆ ನಾಳೆ ಬರಪೀಡಿತ ತಾಲ್ಲೂಕುಗಳ ಮೊದಲ ಪಟ್ಟಿ ಘೋಷಿಸಲಾಗುವುದು, ಮುಂದಿನ ಒಂದು ವಾರ ಅಥವಾ 10 ದಿನಗಳಲ್ಲಿ ಎರಡನೇ ಪಟ್ಟಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು. ಮಳೆ ಪರಿಸ್ಥಿತಿ ಆಧಾರದ ಮೂರನೇ ಪಟ್ಟಿ ಸಿದ್ಧಪಡಿಸಲೂ ಸರ್ಕಾರ ಚಿಂತನೆ ನಡೆಸಿದೆ.ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ಬಿಟ್ಟುಹೋದ ತಾಲ್ಲೂಕುಗಳನ್ನು ಮೂರನೇ ಪಟ್ಟಿಯಲ್ಲಿ ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟ