LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬರ ಪರಿಹಾರ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನ

ನವದೆಹಲಿ: ಕರ್ನಾಟಕ ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ, ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ. ಇದು ಅಸಮಂಜಸವಾಗಿದೆ. ತಜ್ಞರ ತಂಡದ ವರದಿ ಏನು ಎಂದು ರಾಜ್ಯಕ್ಕೆ ತಿಳಿದಿಲ್ಲ. ಅದರ ಪ್ರತಿಯನ್ನ ಸಹ ರಾಜ್ಯಕ್ಕೆ ನೀಡಿಲ್ಲ. ಆದ್ದರಿಂದ, ಆ ವರದಿ ಪ್ರತಿಯನ್ನ ಕೋರ್ಟ್ ಮುಂದೆ ಇಡಬೇಕು. ಅದರ ಅನ್ವಯ ಪರಿಹಾರ ನೀಡುವುದಕ್ಕೆ ನಮ್ಮದು ಯಾವ ತಕರಾರಿಲ್ಲ ಎಂದು ಕರ್ನಾಟಕ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.

ಬಳಿಕ ವಾದ ಮಂಡಿಸಿದ ಕೇಂದ್ರ ಸರ್ಕಾರದ ಪರ ವಕೀಲರು ತಜ್ಞರ ಸಮಿತಿಯ ಶಿಫಾರಸಿನ ಆಧಾರದಲ್ಲಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೊಳಿಸಿದೆ. ಜೊತೆಗೆ ಈ ಕುರಿತಂತೆ ಪ್ರತಿಕ್ರಿಯೆ ನೀಡಲು ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದಾರೆ.

ವಾದ ವಿವಾದವನ್ನು ಆಲಿಸಿದ ಸುಪ್ರೀಂ ಕೇಂದ್ರ ಸರ್ಕಾರದ ಮನವಿ ನಿರಾಕರಿಸಿದೆ. ಮುಂದಿನ ಸೋಮವಾರದ ಒಳಗೆ ತಜ್ಞರ ವರದಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಬಳಿಕ ವಿಚಾರಣೆಯನ್ನ ಮುಂದಿನ ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನಊಟದ ವೇಳೆ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸ್ಪ್ರೇ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನಈ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.?ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಪ್ರತಿಭಟನೆರುಚಿಕರವಾದ ಗೋಧಿ ನುಚ್ಚಿನ ಪಾಯಸ ಮಾಡುವ ವಿಧಾನಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆಇಲಿ ಪಾಷಾಣ ಸಿಂಪಡಣೆ 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.!ಸಿದ್ದರಾಮಯ್ಯರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ.!ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ.: ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್