Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೆಳಗಾವಿ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ

ಬೆಳಗಾವಿ, ಜುಲೈ 17: ನಗರದ ರಾಮದೇವ ಗಲ್ಲಿಯಲ್ಲಿರುವ ಚಿನ್ನಾಭರಣ ಅಂಗಡಿಯೊಂದರಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದೆ. ಖಡೇಬಜಾರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಶುಕ್ರವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರೊಂದರಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳ ತಂಡ ಅಂಗಡಿಯ ಬೀಗ ಒಡೆದು ಒಳನುಗ್ಗಲು ಯತ್ನಿಸಿದೆ. ಆದರೆ ಅವರ ಪ್ರಯತ್ನ ವಿಫಲವಾಗಿದ್ದು, ಯಾವುದೇ ಕಳ್ಳತನ ನಡೆಸದೆ ಸ್ಥಳದಿಂದ ಪರಾರಿಯಾಗಿದೆ.

ಇದಾದ ಸುಮಾರು ಎರಡು ಗಂಟೆಗಳ ಬಳಿಕ ಮತ್ತೊಬ್ಬ ವ್ಯಕ್ತಿ ಬೇರೆ ವಾಹನದಲ್ಲಿ ಬಂದು ಅಂಗಡಿಯ ಮುಂಭಾಗದಲ್ಲಿದ್ದ ಕೆಲವು ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕಣ್ಮರೆಯಾಗಿರುವ ವಸ್ತುಗಳ ಸ್ವರೂಪ ಹಾಗೂ ಮೌಲ್ಯ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಖಡೇಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳನ್ನು ಪತ್ತೆಹಚ್ಚಲು ಅಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳತನಕ್ಕೆ ಯತ್ನಿಸಿದವರ ಗುರುತು ಪತ್ತೆ ಹಾಗೂ ಘಟನೆಯ ಸಂಪೂರ್ಣ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿಸಿದ್ದಾರೆ.

ಈ ಘಟನೆ ಖಡೇಬಜಾರ್ ಪ್ರದೇಶದ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದ್ದು, ಚಿನ್ನಾಭರಣ ಅಂಗಡಿಗಳು ಸೇರಿದಂತೆ ವಾಣಿಜ್ಯ ಪ್ರದೇಶಗಳಲ್ಲಿ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸುವಂತೆ ವ್ಯಾಪಾರಿಗಳು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ