LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾಂಗ್ಲಾದೇಶದ ಮಾಜಿ ಪ್ರಧಾನಿಗೆ ಬಿಗ್ ಶಾಕ್ ಕೊಟ್ಟ ಅಮೆರಿಕ - ಶೇಕ್‌ ಹಸೀನಾ ವೀಸಾ ರದ್ದುಗೊಳಿಸಿದ ಯುಎಸ್‌

ವಾಷಿಂಗ್ಟನ್: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಪಲಾಯನಗೊಂಡು ಸದ್ಯ ಭಾರತದಲ್ಲಿ ಆಶ್ರಯ ಪಡೆದಿರುವ ಶೇಕ್ ಹಸೀನಾ ಅವರಿಗೆ ಅಮೆರಿಕ ಬಿಗ್ ಶಾಕ್ ನೀಡಿದೆ.

ಹೌದು. ಶೇಕ್ ಹಸೀನಾ ಅವರು ಕೆಲಕಾಲ ಇಂಗ್ಲೆಂಡ್​ನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಆದರೆ, ಅವರಿಗೆ ಅಲ್ಲಿಗೆ ತೆರಳಲು ಇನ್ನೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತದ ದೆಹಲಿಯಲ್ಲಿ ಸುರಕ್ಷಿತ ಸ್ಥಳದಲ್ಲಿದ್ದಾರೆ. ಮೂಲಗಳ ಪ್ರಕಾರ ಯುಕೆ (ಇಂಗ್ಲೆಂಡ್) ಆಕೆಗೆ ಆಶ್ರಯ ನೀಡಲು ಸಿದ್ಧವಾಗಿಲ್ಲ. ಹೀಗಾಗಿ, ಶೇಖ್ ಹಸೀನಾ ಅವರ ಪರಿಸ್ಥಿತಿ ಅತಂತ್ರವಾಗಿದೆ. ಇನ್ನೊಂದೆಡೆ ಅಮೆರಿಕ ಶೇಖ್ ಹಸೀನಾ ಅವರ ವೀಸಾವನ್ನು ರದ್ದುಗೊಳಿಸುವ ಮೂಲಕ ಆಘಾತ ನೀಡಿದೆ ಎಂದು ವರದಿಯಾಗಿದೆ.

“ವೀಸಾ ದಾಖಲೆಗಳು ಯುಎಸ್​ ಕಾನೂನಿನ ಅಡಿಯಲ್ಲಿ ಗೌಪ್ಯವಾಗಿರುತ್ತವೆ. ಆದ್ದರಿಂದ, ನಾವು ವೈಯಕ್ತಿಕ ವೀಸಾ ಪ್ರಕರಣಗಳ ವಿವರಗಳನ್ನು ಚರ್ಚಿಸುವುದಿಲ್ಲ” ಎಂದು ಢಾಕಾದಲ್ಲಿನ ಯುಎಸ್ ರಾಯಭಾರ ಕಚೇರಿಯ ವಕ್ತಾರರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಯುನೈಟೆಡ್ ನ್ಯೂಸ್ ಆಫ್ ಬಾಂಗ್ಲಾದೇಶ ವರದಿ ಮಾಡಿದೆ. ಮಾಹಿತಿಗಳ ಪ್ರಕಾರ ಶೇಖ್ ಹಸೀನಾ ಅವರಿಗೆ ಮಾತ್ರವಲ್ಲದೆ ಅವರ ಪಕ್ಷದ ಸದಸ್ಯರು ಮತ್ತು ಅಧಿಕಾರಿಗಳಿಗೆ ಕೂಡ ಅಮೆರಿಕಾ ವೀಸಾ ನಿರ್ಬಂಧಗಳನ್ನು ವಿಧಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್