LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾಬಾ ಸಿದ್ದಿಕ್ ಅವರ ಮಗ ಅಜಿತ್ ಪವಾರ್ ತಂಡಕ್ಕೆ ಸೇರ್ಪಡೆ

ಮುಂಬೈ :ಅಕ್ಟೋಬರ್ 12 ರಂದು ಗುಂಡೇಟಿಗೆ ಬಲಿಯಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕ್ ಅವರು ಶುಕ್ರವಾರ ಬೆಳಿಗ್ಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು ಸೇರಿದ್ದಾರೆ. ಉಪಮುಖ್ಯಮಂತ್ರಿಯೂ ಆಗಿರುವ ಪವಾರ್ ಅವರ ಸಮ್ಮುಖದಲ್ಲಿ ಅವರು ಪಕ್ಷ ಸೇರಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ ಆರೋಪದ ಮೇಲೆ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಇದೀಗ ಶುಕ್ರವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣಕ್ಕೆ ಕಾಲಿಟ್ಟಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವರಾದ ಬಾಬಾ ಸಿದ್ದಿಕಿ ಅವರು 1999 ರಿಂದ 2009 ರವರೆಗೆ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಸ್ಥಾನವನ್ನು ವಿಸರ್ಜಿಸಿ ವಿಭಜನೆಯಾದ ನಂತರ ಅವರು 2009 ರಿಂದ 2014 ರವರೆಗೆ ವಂಡ್ರೆ ಪಶ್ಚಿಮವನ್ನು ಪ್ರತಿನಿಧಿಸಿದರು. ಈ ವರ್ಷದ ಆರಂಭದಲ್ಲಿ ಅವರು ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಪಕ್ಷದ ಜೊತೆಯಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಡುಗಿ ನೋಡುವ ಶಾಸ್ತ್ರಕ್ಕೆ ಹೋದಾಗ ಆಕೆ ನಿರಾಕರಿಸಿದ್ದಕ್ಕೆ ಹಣೆಗೆ ಗುಂಡು ಹಾರಿಸಿ ಯುವಕ ಪರಾರಿಮೊಬೈಲ್ ಅಡಿಕ್ಷನ್‌ನಿಂದ ಮಕ್ಕಳನ್ನು ಕಾಪಾಡಲು ನಿಮ್ಹಾನ್ಸ್‌ನ ಹೊಸ ಯೋಜನೆಟ್ರಂಪ್‌ ನೀತಿಯನ್ನು ಟೀಕಿಸಿದ ಬಳಿಕ DOGE ಮುಖ್ಯಸ್ಥ ಹುದ್ದೆಯಿಂದ ಇಳಿದ ಮಸ್ಕ್‌ಮೇ.30ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗ್ಗಿನ ಉಪಹಾರ ಆರಂಭ'ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ-ಕಾನೂನಿಗಿಂತ ದೊಡ್ಡವರು ಯಾರಿಲ್ಲ'-ಸಿಎಂಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?ಬೆಳಗಾವಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು