ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿಯೇ ನೇಣು..!
ಬೆಂಗಳೂರು: ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಅಗ್ಳೂರು ಹೊರವಲಯ ಬೊಮ್ಮಸಂದ್ರದಲ್ಲಿ ನಡೆದಿದೆ.
ಬಿಟಿಎಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಎ.ಪಿ.ಆದಿತ್ಯ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆದಿತ್ಯ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
2ನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ತಂದೆ ಪ್ರದೀಪ್ ಆರೋಪಿಸಿದ್ದಾರೆ.
ಮಾದಕವಸ್ತು ಸೇವನೆ ಕೇಸ್ನಲ್ಲಿ ಮಗನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆದಿತ್ಯ ತಂದೆ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.