LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿಯನ್ನು ಅಧಿಕಾರದಿಂದ ಇಳಿಸುವುದೇ ‘ಇಂಡಿಯಾ’ದ ಗುರಿ: ಸ್ಟಾಲಿನ್‌

ಚೆನ್ನೈ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಕೆಳಗಿಳಿಸಲು 'ಇಂಡಿಯಾ' ಸಿದ್ಧವಾಗುತ್ತಿದೆ. ಈ ಪರಿಕಲ್ಪನೆ ಬಿಜೆಪಿಯನ್ನು ಚಿಂತಾಕ್ರಾಂತವನ್ನಾಗಿಸಲಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ಹೇಳಿದ್ದಾರೆ.

ಲೋಕಸಭೆ ಗೆಲ್ಲಲು ಈಗಾಗಲೇ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸಿದ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 'ಇಂಡಿಯಾ' ಎಂದು ಹೆಸರಿಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ವಿರೋಧ ಪಕ್ಷಗಳು ಒಗ್ಗೂಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಮುಂದಾಗಿವೆ. ಜಿ 20 ಶೃಂಗಸಭೆಯ ಆಹ್ವಾನ ಪತ್ರಿಕೆಯಲ್ಲಿ 'President of India' ಎಂದು ಸಂಭೋದಿಸುವ ಬದಲು 'President of Bharat' ಎಂದು ಕೇಂದ್ರ ಸರ್ಕಾರ ಸಂಭೋದಿಸಿದೆ. ಇದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಎಂಕೆ ಸ್ಟಾಲಿನ್‌, ಬಿಜೆಪಿ 'ಇಂಡಿಯಾ'ಗೋಸ್ಕರ ಭಾರತದ ಹೆಸರನ್ನು ಬದಲಾಯಿಸಲು ಹೊರಟಿದೆ. ವಿರೋಧ ಪಕ್ಷಗಳ ಮೈತ್ರಿಕೂಟದ ಹೆಸರು 'ಇಂಡಿಯಾ' ಎಂಬ ಕಾರಣದಿಂದ ಬಿಜೆಪಿ ಕೆರಳಿದೆ ಎಂದು ಅವರು ಆರೋಪಿಸಿದ್ದಾರೆ. 'ಫ್ಯಾಸಿಸ್ಟ್ ಬಿಜೆಪಿ ಆಡಳಿತವನ್ನು ಕಿತ್ತೊಗೆಯಲು ಬಿಜೆಪಿಯೇತರ ಶಕ್ತಿಗಳು ಒಂದಾಗಿವೆ. ವಿರೋಧ ಪಕ್ಷಗಳ ಮೈತ್ರಿಗೆ ಸೂಕ್ತವಾಗಿ INDIA ಎಂದು ಹೆಸರಿಸಿವೆ. ಈಗ ಬಿಜೆಪಿ 'ಇಂಡಿಯಾ'ವನ್ನು 'ಭಾರತ್' ಎಂದು ಬದಲಾಯಿಸಲು ಬಯಸಿದೆ. ಭಾರತವನ್ನು ಬದಲಾಯಿಸುವುದಾಗಿ ಈ ಹಿಂದೆ ಬಿಜೆಪಿ ಭರವಸೆ ನೀಡಿತ್ತು. ಆದರೆ, 9 ವರ್ಷಗಳ ನಂತರ ನಮಗೆ ಸಿಕ್ಕಿದ್ದು ಕೇವಲ ಹೆಸರು ಬದಲಾವಣೆ' ಎಂದು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟ