LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಿಜೆಪಿಯವರು ಪ್ರಜಾಪ್ರಭುತ್ವ ಕೊಲೆ ಮಾಡ್ತಿದ್ದಾರೆ'- ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ಪ್ರಜಾಪ್ರಭುತ್ವ ಕೊಲೆ ಮಾಡ್ತಿದ್ದಾರೆ. ಮುಡಾ ಸೈಟು ವಿಚಾರದಲ್ಲಿ ತಂದೆ, ತಾಯಿ ಇಬ್ಬರಿಗೂ ಬೇಸರ ಆಗಿದೆ. ಹಾಗಂತ ಹೆದರಿ ಕೂರುವುದಿಲ್ಲ, ಬಿಜೆಪಿ ಕುತಂತ್ರದ ವಿರುದ್ಧ ಹೋರಾಡುತ್ತೇವೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಜನಾಂದೋಲನ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿರುವ ಅವರು, ಬಿಜೆಪಿಯವರು ಬರೀ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಜನಾದೇಶ ಪಡೆದು ಆಯ್ಕೆಯಾದ ಸರ್ಕಾರಗಳನ್ನ ಕೆಡವಲು ವಾಮಮಾರ್ಗಗಳನ್ನ ಅನುಸರಿಸುತ್ತಿದ್ದಾರೆ. ರಾಜ್ಯಪಾಲರನ್ನ ಬಳಸಿಕೊಳ್ಳೋದು, ಕೇಂದ್ರದ ತನಿಖಾ ಸಂಸ್ಥೆಗಳನ್ನ ಛೂ ಬಿಡುವ ಕೆಲಸವಾಗುತ್ತಿದೆ. ಅವರು ರಾಜಕೀಯ ವಿರೋಧಿಗಳನ್ನ ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಈ ಎಲ್ಲ ಕುತಂತ್ರಗಳನ್ನ ಜನರ ಮುಂದಿಡಲು ಜನಾಂದೋಲನ ಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನನ್ನ ತಂದೆಯ 40 ವರ್ಷದ ರಾಜಕೀಯ ಜೀವನದಲ್ಲಿ ಎಂದಿಗೂ ಈ ರೀತಿ ಕಳಂಕ ಬಂದಿರಲಿಲ್ಲ. ವಿನಾಃಕಾರಣ ಅವರ ಹೆಸರು ಕೆಡಿಸಲು ಸುಳ್ಳು ಸೃಷ್ಟಿಸಿದ್ದಾರೆ. ಭ್ರಷ್ಟಾಚಾರ ಆರೋಪ ಮಾಡ್ತಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ ಎಂದರು.

ರಾಜ್ಯಪಾಲರು ಅಸಾಂವಿಧಾನಿಕವಾಗಿ ನೋಟಿಸ್ ಕೊಟ್ಟಿದ್ದಾರೆ. ಇದರಿಂದ ತಂದೆಯವರಿಗೆ ಬೇಸರವಾಗಿದೆ. ಅಲ್ಲದೇ ನಮಗೆ ನ್ಯಾಯವಾಗಿ ಬರಬೇಕಾದ ಪರಿಹಾರಕ್ಕೆ ಯಾಕೆ ಹೀಗೆ ಮಾಡ್ತಿದ್ದಾರೆ? ಎಂದು ನನ್ನ ತಾಯಿಗೂ ಬೇಜಾರಾಗಿದೆ. ನಾವು ಕೋರ್ಟ್‌ನಲ್ಲಿ ಹೋರಾಡಿ ಧಕ್ಕಿಸಿಕೊಳ್ಳೋಣ ಅಂತ ತಂದೆಯವರು ಹೇಳಿದ್ದಾರೆ. ಈಗಾಗಲೇ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ. ಅಕ್ರಮ ನಡೆದಿದ್ದೇ ಆದಲ್ಲಿ ಸೈಟು ವಾಪಸ್ ತೆಗೆದುಕೊಳ್ಳಲಿ ಎಂದು ಅವರು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST