LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಿಜೆಪಿ, ಜೆಡಿಎಸ್ ನವರು ನನಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ'- ಸಿಎಂ

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ನನಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಹಾಗೂ ಜೆಡಿಎಸ್ ಆರೋಪಗಳ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದು ತಿಳಿಸಿದರು.

ರಾಜಕೀಯ ಲಾಭಕ್ಕಾಗಿ ಬಿಜೆಪಿ - ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ನಾನು ಸಿದ್ಧ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಜೆಡಿಎಸ್‌ನವರ ಹಗರಣಗಳು ಬೇಕಾದಷ್ಟಿದ್ದು, ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST