LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ನಾಯಕ ಶವವಾಗಿ ಪತ್ತೆ - ಮಹಿಳೆಯ ಬಂಧನ

ಪಶ್ಚಿಮ ಬಂಗಾಳ :ಪರಗಣದಲ್ಲಿ ಪಕ್ಷದ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ನಾಯಕ ಶವವಾಗಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮೃತ ಪೃಥ್ವಿರಾಜ್ ನಾಸ್ಕರ್ ಜಿಲ್ಲೆಯಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಟಿಎಂಸಿ ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಕೊಲೆಗೆ ಕಾರಣ ವೈಯಕ್ತಿಕವಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಂಧಿತ ಮಹಿಳೆಯು ಮೃತನಿಗೆ ಹರಿತವಾದ ಆಯುಧಗಳಿಂದ ಹೊಡೆದಿದ್ದು ಆತನ ಸಾವಿಗೆ ಕಾರಣವಾಯಿತು ಎಂದು ಒಪ್ಪಿಕೊಂಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆ ನೀಡಿದ್ದಾರೆ.

ಹತ್ಯೆಯ ನಂತರ ಬಿಜೆಪಿ ಮತ್ತು ಟಿಎಂಸಿ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಕೇಸರಿ ಪಕ್ಷದ ಬೆಂಬಲಿಗರನ್ನು ಹೆದರಿಸಲು ಸ್ಥಳೀಯ ಟಿಎಂಸಿ ಕಾರ್ಯಕರ್ತರು ನಸ್ಕರ್ ಹತ್ಯೆಯ ಹಿಂದೆ ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾನುವಾರದಂದು ಈ 3 ವಸ್ತುಗಳನ್ನು ತಲೆಗೆ ನಿವಾಳಿಸಿಕೊಂಡರೆ ಪ್ರಗತಿಗೆ ಅಡ್ಡಿಯಾಗಿರುವ ಎಲ್ಲಾ ದುಷ್ಟ ಕಣ್ಣುಗಳು ದೂರವಾಗುತ್ತವೆ.!ಇನ್ಸ್ಪೆಕ್ಟರ್, ಪಿಎಸ್ಐ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ .!ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಗೋಡಂಬಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಕ್ಕೆ ತರಬೇತಿ.!ದಾವಣಗೆರೆ: ಆಗಸ್ಟ್ 18 ಮತ್ತು 19 ರಂದು ವಿದ್ಯುತ್ ವ್ಯತ್ಯಯದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 17-08-2025.!!ವಚನ:  -ಅಲ್ಲಮಪ್ರಭುದೇವರು .!ಪೆಹಲ್ಗಾಮ್ನಲ್ಲಿ ಘಟನೆ ನಡೆದ ವೇಳೆ ಒಬ್ಬರೂ ಪೊಲೀಸ್ ಇರಲಿಲ್ಲ ಏಕೆ.?ಧರ್ಮಸ್ಥಳ ಪ್ರಕರಣ: ಸಾಮಾಜಿಕ ಹೋರಾಟಗಾರ ಜಯಂತ್ ಮತ್ತೊಂದು ದೂರು.!RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’!