LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶ ಇಲ್ಲ : ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ ಮಾಹಿತಿ ಇಲ್ಲ. ಯಾರೂ ವಿನಂತಿ ಮಾಡಿಲ್ಲ. ನಗರದಲ್ಲಿ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಬೆಂಗಳೂರು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟಪಡಿಸಿದರು.

ಪಾದಯಾತ್ರೆ ಎಲ್ಲಿಂದ, ಯಾವ ರೀತಿ ಶುರು ಮಾಡುತ್ತಾರೆ ಎಂಬುದು ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರೂ ಬಂದು ಇದುವರೆಗೆ ಅನುಮತಿ ಕೇಳಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಕೆಲವೇ ದಿನಗಳ ಹಿಂದೆ ಕಡ್ಡಿಮುರಿದಂತೆ ಹೇಳಿದ್ದರು. ಇದೀಗ ನಗರ ಪೊಲೀಸ್ ಆಯುಕ್ತರೂ ಅದೇ ರೀತಿ ಹೇಳಿಕೆ ನೀಡಿದ್ದಾರೆ.

 

ಪಾದಯಾತ್ರೆ ವಿಚಾರವಾಗಿ ಬಿಜೆಪಿ ಮತ್ತು ಮಿತ್ರಪಕ್ಷ ಜೆಡಿಎಸ್ ಮಧ್ಯೆ ಗೊಂದಲ ಏರ್ಪಟ್ಟಿತ್ತು. ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದರು. ಅಲ್ಲದೆ, ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದೂ ಹೇಳಿದ್ದರು. ನಂತರ ಬಿಜೆಪಿ ಹೈಕಮಾಂಡ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು.

 

ಶನಿವಾರ ಮೈಸೂರಿಗೆ ಪಾದಯಾತ್ರೆ ಆರಂಭವಾಗಲಿದೆ. ಸಣ್ಣಪುಟ್ಟ ಗೊಂದಲ ಇದ್ದರೂ ಪಾದಯಾತ್ರೆ ನಡೆಯಲಿದೆ. ಶನಿವಾರ ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಗೊಳ್ಳಲಿದೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುರುವಾರ ತಿಳಿಸಿದದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!