E-PAPER
17 Nov 2026, 12:22:42 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಬೆಳಗಾವಿ-13 : ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದರು.

ನಗರದಲ್ಲಿ ಸೋಮವಾರ ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರ‍್ಯಾಲಿ ಮೂಲಕ ತೆರಳಿ ಕಾಂಗ್ರೆಸ್ ಕಚೇರಿಯತ್ತ ಸಾಗಿತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಭಾವಚಿತ್ರಗಳನ್ನು ಹಿಡಿದು, ಕಾಂಗ್ರೆಸ್‌ ಸರ್ಕಾಸರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೋರ ಹಾಕಿದರು. ಕಾಂಗ್ರೆಸ್ ನಾಯಕರ ನಿಲುವುಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು, ವಿವಿಧ ಘೋಷಣೆಗಳನ್ನು ಕೂಗಿ ಕಾಂಗ್ರೆಸ್‌ ವಿರುದ್ದ ಅಸಮಾಧಾನ ಹೋರ ಹಾಕಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಸಂದರ್ಭದಲ್ಲಿ ಕೋರ್ಟ್ ವೃತ್ತದ ಬಳಿ ಪೊಲೀಸರು ಅವರನ್ನು ತಡೆದರು. ಇದರಿಂದಾಗಿ ಪೊಲೀಸರು ಮತ್ತು ಬಿಜೆಪಿ ಮಹಿಳಾ ಕಾರ್ಯಕರ್ತರ ನಡುವೆ ಕೆಲಕಾಲ ಮಾತಿನ ಚಕಮಕಿ, ತಳ್ಳಾಟ ನೋಕಾಟ ನಡೆಯಿತು. ಪ್ರತಿಭಟನಾಕಾರರು ಮುಂದಕ್ಕೆ ತೆರಳಲು ಪ್ರಯತ್ನಿಸಿದರೆ, ಪೊಲೀಸರು ಅವರನ್ನು ತಡೆಯಲು ಮುಂದಾದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡರು.
ಬಳಿಕ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು.
ಬಿಜೆಪಿ ನಾಯಕಿ ಸೋನಾಲಿ ಸರ್ನೋಬತ್, ಉಜ್ವಲಾ ಬಡವನಾಚೆ, ಶಿಲ್ಪಾ ಕೇಕರೆ, ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ ಬಿಜೆಪಿ ಮಹಿಳಾ ಮೋರ್ಚಾದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ನಡೆಸಿದ ಈ ಪ್ರತಿಭಟನೆಯು ರಾಜಕೀಯ ವಲಯದಲ್ಲಿ ಗಮನ ಸೆಳೆಯಿತು. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನಡೆದ ಜಟಾಪಟಿಯಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಕಂಡುಬಂದಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.