E-PAPER
17 Nov 2026, 12:19:59 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಿಜೆಪಿ ವತಿಯಿಂದ ಯಿಂದ*ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನುಮದಿನದ ನಿಮಿತ್ತವಾಗಿ "ರನ್ ಫಾರ್ ಯುನಿಟಿ"* ಅಂದರೆ *"ಏಕತೆಗಾಗಿ ಓಟ"*

ಬೆಳಗಾವಿ-೨೯:  ಬೆಳಗಾವಿ ಜಿಲ್ಲೆಯ ಬಿಜೆಪಿ ವತಿಯಿಂದ *ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನುಮದಿನದ ನಿಮಿತ್ತವಾಗಿ "ರನ್ ಫಾರ್ ಯುನಿಟಿ"* ಅಂದರೆ *"ಏಕತೆಗಾಗಿ ಓಟ"* ಹಮ್ಮಿಕೊಳ್ಳಲಾಗಿತ್ತು

*ದೇಶ ಕಂಡ ಅಪ್ರತಿಮ ನಾಯಕ ಸರ್ದಾರ್ ವಲ್ಲಭಭಾಯ್ ಪಟೇಲ್: ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅಭಿಮತ*

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಏಕ್ ಭಾರತ್ ಶ್ರೇಷ್ಠ ಭಾರತ್ ಲಕ್ಷ್ಯದೊಂದಿಗೆ ಆಚರಿಸಲ್ಪಡುವ ಏಕತಾ ಓಟಕ್ಕೆ ಚಾಲನೆ ನೀಡಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ 1947ರ ಆಗಸ್ಟ್‌ 5ರಂದು ದಾಖಲೆಗಳಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ ದೇಶದಾದ್ಯಂತ ಹಬ್ಬಿದ್ದ ನೂರಾರು ರಾಜಸಂಸ್ಥಾನಗಳನ್ನು ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸುವುದು ಸವಾಲೇ ಆಗಿತ್ತು. ಈ ಕೆಲಸವನ್ನು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ರೈತ ಚಳವಳಿಯ ರೂವಾರಿ, ಗೃಹಸಚಿವರಾಗಿದ್ದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಸಮರ್ಥವಾಗಿ ಮಾಡಿದರು. ಪ್ರೀತಿ ಬಳಸುವಲ್ಲಿ ಪ್ರೀತಿಯಿಂದ, ದಂಡಪ್ರಯೋಗ ಮಾಡಬೇಕಾದಲ್ಲಿ ಅದರಿಂದ ಕೆಲಸ ಸಾಧಿಸಿದರು; ಒಕ್ಕೂಟ ಭಾರತವನ್ನು ಕಟ್ಟಿದರು. ಇಂದು ಭಾರತವೊಂದು ಒಕ್ಕೂಟವಾಗಿ ಉಳಿದಿದ್ದರೆ ಅದು ಅವರಿಂದಲೇ. ಅವರ ನೆನಪಿನಲ್ಲೇ ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸರಕಾರ ಪಟೇಲ್‌ ಅವರ ಜನ್ಮದಿನವಾದ ಅಕ್ಟೋಬರ್‌ 31ನ್ನು ‘ಏಕತಾ ದಿವಸ್‌’ ಎಂದು ಘೋಷಿಸಿದೆ ಎಂದು ಹೇಳಿದರು.
ನಂತರ ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ 1919ರಲ್ಲಿ ಗುಜರಾತಿನ ಖೇಡಾ ಪ್ರಾಂತ ತೀವ್ರ ಕ್ಷಾಮದಿಂದ ತತ್ತರಿಸುತ್ತಿದ್ದು, ಅಲ್ಲಿಯ ರೈತರು ಕರ ವಿನಾಯಿತಿಗೆ ಬೇಡಿಕೆಯಿಟ್ಟರು. ಪಟೇಲರು ಹಳ್ಳಿಹಳ್ಳಿ ತಿರುಗಿ, ರಾಜ್ಯವ್ಯಾಪಿ
ಆಂದೋಲನದಲ್ಲಿ ತೊಡಗಿಸಿದರು. ರಾಜ್ಯದೆಲ್ಲೆಡೆ ಎಲ್ಲರಿಗೂ ಪಟೇಲರ ನಾಯಕತ್ವ ಒಪ್ಪಿಗೆಯಾಯಿತು. ಬ್ರಿಟಿಷ್‌ ಅಧಿಕಾರಿಗಳ ದೌರ್ಜನ್ಯದ ನಡುವೆಯೂ ಹಿಂಸಾತ್ಮಕವಾಗಿ
ಸಾಗಿದ ಈ ಚಳವಳಿಗೆ ಸರಕಾರ ಮಣಿದು, ಕರವನ್ನು ಮುಂದೂಡಿತು. ಪಟೇಲರು ಈ ಸತ್ಯಾಗ್ರಹದಿಂದ ಮಹಾನಾಯಕ ಎಂದು ಗುಜರಾತಿ ಜನಮನ್ನಣೆ ಪಡೆದರು. 1919ರಿಂದ
1928ರವರೆಗೆ ಪಟೇಲರು, ಅಸ್ಪೃಶ್ಯತೆ, ಮದ್ಯಪಾನದ ವಿರುದಟಛಿ ವ್ಯಾಪಕ ಚಳವಳಿ ನಡೆಸಿದರು. 1922ರಲ್ಲಿ ಅಹಮದಾಬಾದಿನ ಮುನಿಸಿಪಾಲಿಟಿಯ ಅಧ್ಯಕ್ಷ ರಾಗಿ ವಿದ್ಯುತ್‌ ಸರಬರಾಜು, ಚರಂಡಿ ಹಾಗೂ ನೈರ್ಮಲ್ಯ ವ್ಯವಸ್ಥೆ, ಹಾಗೂ ಶಿಕ್ಷ ಣ ವ್ಯವಸ್ಥೆಗಳಲ್ಲಿ ಭಾರಿ ಸುಧಾರಣೆ ತಂದರು. 1928ರಲ್ಲಿ ಬಾರ್ಡೋಲಿಯು ಕ್ಷಾಮಕ್ಕೀಡಾಯಿತು. ಸರಕಾರ ಕಂದಾಯವನ್ನು ಹೆಚ್ಚು ಮಾಡಿತು. ಇದರ ವಿರುದ್ಧ ಪಟೇಲರು ಜನಸಮೂಹವನ್ನು ಒಟ್ಟುಗೂಡಿಸಿ ನಡೆಸಿದ ಪ್ರತಿಭಟನೆ ದೇಶದಲ್ಲೆಲ್ಲ ಹೆಸರು ಮಾಡಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಭಾ.ಜ.ಪಾ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕ ವಿಠ್ಠಲ್ ಹಲಗೆಕರ್, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಮಹಾಪೌರರಾದ ಸವಿತಾ ಕಾಂಬಳೆ, ಮಾಜಿ ಶಾಸಕ ಅರವಿಂದ ಪಾಟೀಲ,
ಭಾ.ಜ.ಪಾ ಮುಖಂಡ ರವಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಪ್ರಶಾಂತ್ ಅಮ್ಮಿನಭಾವಿ, ಸುಭಾಷ್ ಸಣ್ಣವೀರಪ್ಪನವರ, ಚೇತನ್ ಅಂಗಡಿ, ಪ್ರಸಾದ್ ದೇವರಮನಿ, ವಿಠ್ಠಲ್ ಸಾಯಣ್ಣವರ,ಮನೋಜ್ ಪಾಟೀಲ್, ಪ್ರವೀಣ್ ಶಿಂಗಾರಿ, ನಾಗಪ್ಪ ಸಂಗೊಳ್ಳಿ , ಶ್ರೀಕಾಂತ್ ಬೆಲ್ಲದ, ಧನ್ಯಕುಮಾರ ಪಾಟೀಲ್ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು  ಈ ಸಂದರ್ಭದಲ್ಲಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.