E-PAPER
17 Nov 2026, 12:21:03 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಿಜೆಪಿ ವತಿಯಿಂದ ಪ್ರತಿಭಟನೆ ಜಿಲ್ಲಾಧಿಕಾರಿಗೆ ಮನವಿ

  • ಬೆಳಗಾವಿ-೦೫:ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿ ನಗರದ ರಾಣಿ ಚೆನ್ನಮ್ಮ ಸರ್ಕಲ್ ದಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಅವರಿಗೆ ಮನವಿ ನೀಡಲಾಯಿತು*

*ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ತಕ್ಷಣ ರಾಜೀನಾಮೆ ನೀಡಲಿ*

ಮಾಜಿ ಸಚಿವರಾದ ಮುರಗೇಶ್ ನಿರಾಣಿ ಮಾತನಾಡಿ ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ
ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಅದರಲ್ಲೂ ಕೇಂದ್ರದ ಶ್ರೀ ನರೇಂದ್ರ ಮೋದಿ ನೆತೃತ್ವದ ಸರಕಾರ ದೇಶದ ಜನತೆಯ
ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ
ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ
ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ
ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ
ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು
ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯದ ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1,500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ
ಪುಷ್ಟಿಕರಿಸಿ ನೋಟೀಸ್ ನೀಡಲಾಗಿದೆ, ಬೆಂಗಳೂರಿನ ವಿಧಾನಸೌಧವೂ ಸೇರಿದಂತೆ ಹಲವಾರು ಪ್ರಮುಖ ಆಸ್ತಿಗಳು ವಕ್ಫ್ ಗೆ
ಸೇರಿದ್ದು ಎಂದು ಮುಸ್ಲಿಂ ನಾಯಕರು ಹೇಳಿಕೆಯಿತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ.
ಸವಣೂರು ತಾಲ್ಲೂಕು ಕಡಕೋಳ ಗ್ರಾಮಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್
ಮುಂದಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಫ್ ಆಸ್ತಿ ಎಂದು ವಕ್ಫ್ ಹಕ್ಕು
ಮಂಡಿಸಿದೆ. ಸರಕಾರಿ ಅಧೀನದಲ್ಲಿರುವ ಆಸ್ತಿಗಳನ್ನೇ ತನ್ನದೆಂದು ವಕ್ಫ್ ಬೋರ್ಡ್ ಹೇಳುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ
ಮಹದೇವಪುರ ಗ್ರಾಮದ ಚಿಕ್ಕಮ್ಮ ಚಿಕ್ಕದೇವಿ ದೇಗುಲಕ್ಕೆ ಸೇರಿದ 6 ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ.
ವಿಜಯಪುರ ಜಿಲ್ಲೆಯ 1500 ವರ್ಷ ಇತಿಹಾಸವಿರುವ ಸಿಂಧಗಿಯ ವಿರಕ್ತ ಮಠವೂ ವಕ್ಫ್ ಆಸ್ತಿ ಎಂದು ದಾಖಲೆಗಳನ್ನು
ಸೃಷ್ಟಿಸುತ್ತಿದ್ದಾರೆ. 2000 ವರ್ಷ ಇತಿಹಾಸವಿರುವ ಸೋಮನಾಥೇಶ್ವರ ದೇವಾಲಯವೂ ವಕ್ಫ್ ಆಸ್ತಿ ಎಂಬ ಹಕ್ಕು ಪ್ರತಿಪಾದನೆ
ವಕ್ಫ್ ಮಂಡಳಿಯಿಂದ ಬರುತ್ತಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಪೂರ್ವಜರಿಂದ ಬಂದ
ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೂ ವಕ್ಫ್ ಆಸ್ತಿ ಎಂದು ತಹಸೀಲ್ದಾರ್‌ನಿಂದ ನೋಟೀಸ್ ನೀಡಲಾಗಿದೆ. ಕರ್ನಾಟಕದ
ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1,500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ
ಪುಷ್ಠಿಕರಿಸಿ ನೋಟೀಸ್ ನೀಡಿ ನಂತರ ಬಿಜೆಪಿಯ ಒತ್ತಾಯದಿಂದ ಹಿಂಪಡೆಯಲಾಗಿದೆ ಎಂದು ಹೇಳಿದರು.ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ
ಹದಗೆಡುವುದಕ್ಕೆ ಕಾರಣವಾಗಿದೆ. ಸರಕಾರದ ವಿವೇಚನೆಯಿಲ್ಲದೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ
ವ್ಯಾಜ್ಯ ಬೀದಿಗೆ ಬರುತ್ತಿದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಇದು
ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ
ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ಹೇಳಿದರು.ನಂತರ ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಮಹಾಂತೇಶ ಕವಟಗಿಮಠ ಮಾತನಾಡಿ
ಇದೇ ತೆರನಾದ ನಿಲುವುಗಳನ್ನು ಮುಂದುವರೆಸಿದಲ್ಲಿ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರಕಾರವೇ
ನೇರವಾಗಿ ಹೊಣೆಯಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ
ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ಓಲೈಕೆ
ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕೆಂದು ಬಿಜೆಪಿ ಆಗ್ರಹಿಸುತ್ತದೆ.
ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ
ತಾತ್ಕಾಲಿಕ
ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ.
ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರೆಯಲಿದೆ. ಮತ್ತದೇ ರೀತಿಯ ಕೃತ್ಯಗಳನ್ನು ಕಾಂಗ್ರೆಸ್
ನಾಯಕರು ಹಾಗೂ ಕಾಂಗ್ರೆಸ್ ಸರಕಾರ ಮುಂದುವರೆಸಿದಲ್ಲಿ ಇಡೀ ರಾಜ್ಯದಲ್ಲಿ ಜನತೆಯನ್ನು
ಒಗ್ಗೂಡಿಸಿ ಉಗ್ರ ಪ್ರತಿಭಟನೆಯನ್ನು
ಹಮ್ಮಿಕೊಳ್ಳಬೇಕಾಗುತ್ತದೆ ತಕ್ಷಣ ಜಮೀರ್ ಅಹ್ಮದ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು, ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ರಾಜ ಉಪಾಧ್ಯಕ್ಷರಾದ ಅನಿಲ್ ಬೆನಕೆ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ್ ಅಪ್ಪಾಜಿಗೋಳ, ಬಸವರಾಜ್ ಹುಂದ್ರಿ, ರಮೇಶ್ ದೇಶಪಾಂಡೆ, ಧನಂಜಯ ಜಾಧವ, ಯುವರಾಜ ಜಾಧವ,ಮುರುಗೇಂದ್ರಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ್, ಈರಯ್ಯ ಖೋತ, ರಾಜಶೇಖರ್ ಡೋಣಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.