LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಹಾರದಲ್ಲಿ ಆರ್‌ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಗುಂಪು

ಪಾಟ್ನಾ: ಬೈಕ್‌ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್‌, ಆರ್‌ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್‌ನಲ್ಲಿ ಮಂಗಳವಾರ ಸಂಭವಿಸಿದೆ. 

ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಮೃತಪಟ್ಟವರು. 

ಪಂಕಜ್ ರೈ ಅವರು ನಿನ್ನೆ ಸಂಜೆ ತಮ್ಮ ನಿವಾಸದ ಬಳಿಯ ಬಟ್ಟೆ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಮೂವರು, ಪಂಕಜ್ ರೈ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಪಂಕಜ್ ರೈ ಅವರು ಆತ್ಮರಕ್ಷಣೆಗೆ ಮನೆ ಕಡೆಗೆ ಓಡಿದ್ದಾರೆ. ಆದರೂ, ದಾಳಿಕೋರರು ಅವರನ್ನು ಹಿಂಬಾಲಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸದ್ದು ಕೇಳಿ ತಕ್ಷಣ ಆತನ ಮನೆಯವರು ಮತ್ತು ಸ್ಥಳೀಯರು ಧಾವಿಸಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪಂಕಜ್ ರೈ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎನ್‌ಡಿಎ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಗೂಂಡಾಗಳು ಹಾಜಿಪುರದಲ್ಲಿ ವಾರ್ಡ್ ಕೌನ್ಸಿಲರ್ ಪಂಕಜ್ ರೈ ಅವರನ್ನು ರಾತ್ರಿ ಗುಂಡಿಕ್ಕಿ ಕೊಂದಿದ್ದಾರೆ. ಮುಖ್ಯಮಂತ್ರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳು ಅವರ ಗೂಂಡಾಗಳು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿರುವಾಗ ಶಾಂತಿಯುತವಾಗಿ ನಿದ್ರಿಸುತ್ತಿದ್ದಾರೆ ಎಂದು ಆರ್‌ಜೆಡಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿ