LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಹಾರದಲ್ಲಿ 10 ಸೇತುವೆಗಳು ಕುಸಿತ- 16 ಎಂಜಿನಿಯರ್​​ಗಳ ಅಮಾನತು

ದೆಹಲಿ: ಬಿಹಾರದಲ್ಲಿ ಕಳೆದ 15 ದಿನಗಳಲ್ಲಿ 10 ಸೇತುವೆಗಳು ಕುಸಿದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 16 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿಹಾರ ಅಭಿವೃದ್ಧಿ ಕಾರ್ಯದರ್ಶಿ ಚೈತನ್ಯ ಪ್ರಸಾದ್, ರಾಜ್ಯ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಸೇತುವೆ ನಿರ್ಮಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ 10ನೇ ಸೇತುವೆ ಕುಸಿದಿದ್ದು ಗುರುವಾರ ಸರನ್ ಜಿಲ್ಲೆಯಿಂದ ವರದಿಯಾಗಿದೆ. ಇದು 24 ಗಂಟೆಗಳ ಅವಧಿಯಲ್ಲಿ ಸರನ್ ಜಿಲ್ಲೆಯಲ್ಲಿ ಕುಸಿದ ಮೂರನೇ ಸೇತುವೆಯಾಗಿದೆ ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ 10 ಸೇತುವೆಗಳು ಕುಸಿದಿವೆ.

ಬುಧವಾರ ನಡೆದ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್, ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆಯನ್ನು ನಡೆಸುವಂತೆ ಮತ್ತು ತಕ್ಷಣದ ದುರಸ್ತಿ ಅಗತ್ಯವಿರುವ ಸೇತುವೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!