E-PAPER
17 Nov 2026, 12:22:34 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬುಧವಾರ ಕೆಎಲ್‍ಇ ಸ್ಕೂಲ್, ಚಿಕ್ಕೋಡಿ ಉದ್ಘಾಟನೆ

ಬೆಳಗಾವಿ-26:ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಕೆಎಲ್‍ಇ ಸಂಸ್ಥೆಯು ಮತ್ತೊಂದು ಮೈಲ್ಲುಗಲ್ಲಿಗೆ ಸಾಕ್ಷಿಯಾಗಲಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ ಹಾಗೂ ಆಡಳಿತ ಮಂಡಳಿಯವರ ಇಚ್ಛಾಶಕ್ತಿಯಂತೆ ಆಂಗ್ಲ ಮಾಧ್ಯಮದ ಕೆಎಲ್‍ಇ ಸ್ಕೂಲ್ ಬುಧವಾರ ದಿ 28  ರಂದು ಮುಂಜಾನೆ 10.30 ಗಂಟೆಗೆ ಉದ್ಘಾಟನೆಗೊಳ್ಳುತ್ತಿದೆ.


ಕೇಂದ್ರ ವಿದೇಶಾಂಗ ಸಚಿವರಾದ ಪದ್ಮ ಶ್ರೀ ಡಾ.ಎಸ್.ಜೈಶಂಕರ ಅವರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಪ್ರಹ್ಲಾದ ಜೋಶಿಯವರು ಆಗಮಿಸಲಿದ್ದಾರೆ.
ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರು ಮತ್ತು ಕರ್ನಾಟಕ ಸರ್ಕಾರದ ದೆಹಲಿ ಎರಡನೇ ಪ್ರತಿನಿಧಿ ಶ್ರೀ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಲೋಕಸಭಾ ಸದಸ್ಯರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ, ಚಿಕ್ಕೋಡಿ ಪುರಸಭೆಯ ಮಾಜಿ ಅಧ್ಯಕ್ಷರಾದ ಪ್ರವೀಣ ಕಾಂಬಳೆ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕೆಎಲ್‍ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತೇಶ ಎಸ್. ಕೌಜಲಗಿ ವಹಿಸಲಿದ್ದಾರೆ.
ಕೆಎಲ್‍ಇ ಸ್ಕೂಲ್, ಚಿಕ್ಕೋಡಿ,
1916 ರಲ್ಲಿ ಸ್ಥಾಪನೆಗೊಂಡ ಕೆಎಲ್‍ಇ ಸಂಸ್ಥೆಯು 108 ವರ್ಷಗಳ ತನ್ನ ಚರಿತ್ರೆಯಲ್ಲಿ ಶೈಕ್ಷಣಿಕ, ಆರೋಗ್ಯ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ. 1,38,000 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, 18,000 ಸಿಬ್ಬಂದಿ ವರ್ಗದವರು ಸೇವೆ ಸಲ್ಲಿಸುತ್ತಿದ್ದಾರೆ.
ಶಿಕ್ಷಣದ ಇಂದಿನ ಎಲ್ಲ ಬೇಕು-ಬೇಡಿಕೆಗಳನ್ನು ಪೂರೈಸಿರುವ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದ ಗುಣಾತ್ಮಕತೆಯನ್ನು ನೀಡುತ್ತಾ ಬಂದಿದೆ. ಶಿಶುವಿಹಾರದಿಂದ ಸ್ನಾತಕೋತ್ತರ ವರೆಗೆ ಮೌಲಿಕ ಶಿಕ್ಷಣವನ್ನು ನೀಡಿ ಅಗಾಧವಾಗಿ ಬೆಳೆದು ನಿಂತಿದೆ. ಅಸಂಖ್ಯ ಪ್ರತಿಭಾವಂತರನ್ನು ರೂಪಿಸಿದೆ. ರಾಷ್ಟ್ರಕ್ಕೆ ಅದ್ವಿತೀಯ ವೈದ್ಯರನ್ನು, ಅಭಿಯಂತರರನ್ನು, ಸಾಹಿತಿಗಳನ್ನು, ಉದ್ಯಮಿಪತಿಗಳನ್ನು, ಶಿಕ್ಷಕರನ್ನು ನೀಡಿದ ಖ್ಯಾತಿ ಕೆಎಲ್‍ಇ ಸಂಸ್ಥೆಯದು. ಸಂಸ್ಥೆಯ ಬಹುಸಂಖ್ಯೆಯ ಶಿಕ್ಷಣ ಸಂಸ್ಥೆಗಳು ಹಾಗೂ ಆರೋಗ್ಯ ಸೇವಾ ಕೇಂದ್ರಗಳು ಗ್ರಾಮೀಣ ಭಾಗದಲ್ಲಿಯೇ ಇರುವುದನ್ನು ಗಮನಿಸಬಹುದು. ರೈತರ, ಕಾರ್ಮಿಕ ವರ್ಗದ ಮಕ್ಕಳ ಶೈಕ್ಷಣಿಕ ವಿಕಾಸಕ್ಕಾಗಿ ಉನ್ನತ ದರ್ಜೆಯ ಶಿಕ್ಷಣ ಕೇಂದ್ರಗಳನ್ನು ಇಲ್ಲಿ ಸ್ಥಾಪಿಸಲಾಗಿದೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಕೇಂದ್ರವಾಗಿಟ್ಟುಕೊಂಡು ಅಂಕಲಿ, ನಿಪ್ಪಾಣಿ, ಹಾವೇರಿ, ಸವದತ್ತಿ, ಅಥಣಿ, ಗದಗ, ಗೋಕಾಕ, ಮಾಲೂರ, ಗಳತಗಾ, ಕೇರೂರ, ಕೊಟಗೊಂಡಹುನಶಿ ಅಸಂಖ್ಯ ಗ್ರಾಮೀಣ ಪ್ರದೇಶಗಳಲ್ಲಿಯೇ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳನ್ನು ಹುಟ್ಟುಹಾಕಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಕೆಎಲ್‍ಇ ಶಾಲೆಯ ಕಟ್ಟಡಗಳನ್ನು ನೋಡುವುದು ಒಂದು ವಿಸ್ಮಯ. ಅಂತರಾಷ್ಟ್ರೀಯ ಮಟ್ಟದ ಎಲ್ಲ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗಿದೆ.
ಕರ್ನಾಟಕ, ಮಹಾರಾಷ್ಟ್ರ ಮೊದಲುಗೊಂಡು 15 ಸಿಬಿಎಸ್‍ಸಿ ಶಾಲೆಗಳನ್ನು, 7 ರಾಜ್ಯ ಪಠ್ಯಕ್ರಮದ ಆಂಗ್ಲಮಾಧ್ಯಮ ಶಾಲೆಗಳನ್ನು ಕೆಎಲ್‍ಇ ಸಂಸ್ಥೆಯು ಮುನ್ನಡೆಸುತ್ತಿದೆ. ಈ ಶಾಲೆಗಳಲ್ಲಿ ಒಟ್ಟು 21,000ಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲಾ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಅಂತೆಯೇ ಚಿಕ್ಕೋಡಿಯ ಕೆಎಲ್‍ಇ ಸ್ಕೂಲ್ 2020 ರಲ್ಲಿ ಪ್ರಾರಂಭಗೊಂಡಿತು. 5 ಎಕರೆ ನಿವೇಶನದಲ್ಲಿ 1,05,000 ಚ.ಅಡಿ ವಿಸ್ತೀರ್ಣದಲ್ಲಿ ಪ್ರಸ್ತುತ ಭವ್ಯವಾದ ಶಾಲೆಯ ಕಟ್ಟಡವನ್ನು 17 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಅತ್ಯಂತ ವೈವಿಧ್ಯಪೂರ್ಣವಾಗಿರುವ ಈ ಶಾಲಾ ಕಟ್ಟಡದಲ್ಲಿ ವಿಶೇಷವಾದ ಹೈಟೆಕ್ ವರ್ಗಕೋಣೆಗಳಿವೆ. ಅತ್ಯಾಧುನಿಕವಾದ ವಿಜ್ಞಾನ, ಕಂಪ್ಯೂಟರ್ ಪ್ರಯೋಗಾಲಯಗಳನ್ನು, ಗ್ರಂಥಾಲಯ, ಕ್ರೀಡಾ ವಿಭಾಗ, ಸಂಗೀತ ತರಬೇತಿ ಹಾಗೂ ಭವ್ಯವಾದ ಉದ್ಯಾನವನವನ್ನು ಹೊಂದಿದೆ. ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಬಸ್‍ನ ಸೌಲಭ್ಯವನ್ನು ಒದಗಿಸಲಾಗಿದೆ. ಆವರಣದಲ್ಲಿ ಸಿಸಿಟಿವಿ ಕ್ಯಾಮರಾಗಳು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾದ ಶೌಚಾಲಯಗಳನ್ನು ಒದಗಿಸಲಾಗಿದೆ. ಪ್ರಸ್ತುತ ಶಾಲೆಯಲ್ಲಿ ನರ್ಸರಿಯಿಂದ 8ನೇ ತರಗತಿಯ ವರೆಗೆ 400 ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 50 ಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.