E-PAPER
17 Nov 2026, 12:21:03 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೃಹತ್ ಆಲ್ ಇಂಡಿಯಾ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.12 ರಿಂದ

ಬೆಳಗಾವಿ-05 : ಬೃಹತ್ ಆಲ್ ಇಂಡಿಯಾ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.12 ರಿಂದ 22ರವರೆಗೆ ಆಯೋಜಿಸಲಾಗಿದೆ ಎಂದು ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ್ ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾ ಗೋಷ್ಠಿ ಮಾತನಾಡಿದ ಅವರು ದೇಶದ ವಿವಿಧ ಮೂಲೆಗಳ ಪ್ರತಿಭಾವಂತ ಆಟಗಾರರನ್ನು ಒಂದುಗೂಡಿಸುವ 'ಆಲ್ ಇಂಡಿಯಾ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್' ಇದೇ ಫೆಬ್ರವರಿ 12ರಿಂದ 22ರವರೆಗೆ ಒಟ್ಟು 11 ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಐಪಿಎಲ್ ಖ್ಯಾತಿಯ ಯುವ ತಾರೆಗಳು ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿದೆ ಎಂದರು.

ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ವಿಜೇತರಾಗುವ ತಂಡಗಳಿಗೆ ಭಾರಿ ಮೊತ್ತದ ಬಹುಮಾನವನ್ನು ಘೋಷಿಸಲಾಗಿದೆ: ಪ್ರಥಮ ಬಹುಮಾನ 5,27,127 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ: 2,51,127 ನಗದು ಹಾಗೂ ಟ್ರೋಫಿ. ಸರಣಿ ಶ್ರೇಷ್ಠ (Man of the Series): ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರನಿಗೆ ಆಕರ್ಷಕ 'ಸ್ಕೂಟಿ' ಬಹುಮಾನವಾಗಿ ನೀಡಲಾಗುವುದು ಎಂದರು.

ದೇಶದ ವಿವಿಧ ತಂಡಗಳ ಭಾಗವಹಿಸುವಿಸಲಿವೆ. ಈಗಾಗಲೇ ಕ್ರೀಡಾ ಗ್ಲಲಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಈ ಟೂರ್ನಿಯಲ್ಲಿ ಭಾಗವಹಿಸಲು ಒಟ್ಟು 48 ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಪೈಕಿ ಉತ್ತರ ಪ್ರದೇಶ, ದೆಹಲಿ, ಗೋವಾ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಸುಮಾರು 40 ತಂಡಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿವೆ. ಇನ್ನುಳಿದ ಕೇವಲ 8 ಸ್ಥಾನಗಳಿಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಐಪಿಎಲ್ ತಾರೆಗಳ ಮಿಂಚಿನ ಆಟ ಕೇವಲ ಸ್ಥಳೀಯ ಆಟಗಾರರಲ್ಲದೆ, ಐಪಿಎಲ್ (IPL) ಅಂಗಳದಲ್ಲಿ ಮಿಂಚಿದ ಹಲವು ಯುವ ಪ್ರತಿಭಾವಂತ ಕ್ರೀಡಾಪಟುಗಳು ಈ ಟೆನಿಸ್ ಬಾಲ್ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವುದು ಕ್ರೀಡಾಭಿಮಾನಿಗಳಿಗೆ ಹಬ್ಬದೂಟವಾಗಲಿದೆ ಎಂದರು.

ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳಿಗೆ ಪ್ರತಿ ತಂಡಕ್ಕೆ 15,000 ಪ್ರವೇಶಾತಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ತಂಡಗಳು ಕೂಡಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.