LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ - ಆರೋಪಿಗಾಗಿ 40 ಜನರ ತಂಡ ರಚನೆ

ಬೆಂಗಳೂರು: ಬೆಂಗಳೂರು, ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಆತನ ಬಂಧನಕ್ಕಾಗಿ 40 ಜನರ ತಂಡ ರಚನೆ ಮಾಡಲಾಗಿದೆ.

ನಗರದಲ್ಲಿಯುವತಿ ಮೇಲೆ ಅತ್ಯಾಚಾರ ಆಗಿರುವ ಘಟನೆ ನಡೆದಿದೆ. ಆಟೋದಲ್ಲಿ ಕರೆತಂದು ಅತ್ಯಾಚಾರ ಎಸಗಿರಬಹುದು ಎಂದು ಅಂದಾಜಿಸಲಾಗಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ. ನಿನ್ನೆ ತಡರಾತ್ರಿ ಓರ್ವ ವ್ಯಕ್ತಿಯಿಂದ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು ಸದ್ಯ ಆರೋಪಿಯ ಗುರುತು ಪತ್ತೆ ಮಾಡಲಾಗಿದೆ.

ನಿನ್ನೆ ಸ್ನೇಹಿತನ ಜೊತೆ ಯುವತಿ ಪಾರ್ಟಿಗೆ ಬಂದಿದ್ದ ಯುವತಿ, ಪಾರ್ಟಿ ಮುಗಿಸಿ ಹೋಗುವಾಗ ಸ್ನೇಹಿತನ ಕಾರು, ಆಟೋಗೆ ಟಚ್ ಆಗಿದೆ. ಈ ವೇಳೆ ಆಟೋ ಚಾಲಕರು ಗಲಾಟೆ ಮಾಡಿದ್ದಾರೆ. ಬೈಕ್ ಒಂದರಲ್ಲಿ ಡ್ರಾಪ್ ತೆಗೆದುಕೊಂಡು ಅಲ್ಲಿಂದ ಯುವತಿ ಹೊರಟಿದ್ದಳು. ಮಾರ್ಗ ಮಧ್ಯೆ ಇಳಿದು ಮತ್ತೊಂದು ಬೈಕ್‌ನಲ್ಲಿ ಡ್ರಾಪ್ ಪಡೆದಿದ್ದಾಳೆ ಎನ್ನಲಾಗಿದೆ. ಈತ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಯುವತಿ ಎಮರ್ಜೆನ್ಸಿ ನಂಬರ್‌ಗಳಾಗಿ ತಂದೆ ಮತ್ತು ಸ್ನೇಹಿತೆಯ ನಂಬರ್ ನೀಡಿದ್ದಳು. ಎಮರ್ಜೆನ್ಸಿ ನಂಬರ್‌ಗೆ ಕರೆ ಹೋದಾಗ ಸಂತ್ರಸ್ತೆಯ ತಂದೆ ಮಗಳ ಗೆಳತಿಗೆ ಕರೆ ಮಾಡಿದ್ದರು. ಸ್ನೇಹಿತರು ಬಂದಾಗ ಸಂತ್ರಸ್ತೆಯ ಸ್ಥಿತಿ ಶೋಚನೀಯವಾಗಿದ್ದು. ಸಂತ್ರಸ್ತೆಯ ಬಟ್ಟೆ ಸಂಪೂರ್ಣವಾಗಿ ಕಿತ್ತುಹೋಗಿತ್ತು. ಕಾರಿನ ಟಾರ್ಪಲ್‌ನಿಂದ ಯುವತಿಯನ್ನ ಮುಚ್ಚಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ 40 ಜನರ ಟೀಂ ರಚನೆ ಮಾಡಿ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'2023ರ ವಿಧಾನಸಭೆ ಚುನಾವಣೆಗೆ ಮುನ್ನ ಶ್ರೀರಾಮುಲುಗೆ ಪಕ್ಷಕ್ಕೆ ಆಹ್ವಾನಿಸಿದ್ದೆ'- ಡಿಕೆಶಿಬಿಗ್‌ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಮೇಲೆ ಹಲ್ಲೆ3ನೇ ಬಾರಿ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಬಿಕಾ ರೈನಾಈ ಒಂದು ವಸ್ತುವನ್ನು ನಿಮ್ಮ ದಿಂಬಿನ ಕೆಳಗಡೆ ಇಟ್ಟು ಮಲಗಿದರೆ ಸಾಕು...!ಊಟದ ನಂತರ ವೀಳ್ಯದೆಲೆ ತಿನ್ನುವುದರಿಂದ ವಿಶೇಷ ಆರೋಗ್ಯ ಲಾಭಗಳು…ಈ ಕಾರಣಕ್ಕೆ ಜ.27 ರಿಂದ ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ-ಕಿನ್ನರಿ ಬ್ರಹ್ಮಯ್ಯ ಅವರ ವಚನ.!ಖೋ ಖೋ ವಿಶ್ವಕಪ್‌: ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂಮಹಾರಾಷ್ಟ್ರದ ಮಿಲಿಟರಿ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 8 ಸಾವು, 7 ಮಂದಿಗೆ ಗಾಯರೇಣುಕಾಸ್ವಾಮಿ ಕೊಲೆ ಕೇಸ್‌: ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ - ಡಿ ಗ್ಯಾಂಗ್‌ಗೆ ಬಿಗ್ ರಿಲೀಫ್