LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ 5 ವರ್ಷದ ಬಾಲಕಿ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ 5 ವರ್ಷದ ಬಾಲಕಿ ಬಲಿಯಾಗಿರೋ ಘಟನೆ ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ನಡೆಸಿದೆ. ಘಟನೆಯಲ್ಲಿ 5 ವರ್ಷದ ಪೂರ್ವಿ ರಾವ್ ಸಾವನ್ನಪ್ಪಿದ್ದು, ಪೂರ್ವಿ ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಿಕೆಜಿ ಓದುತ್ತಿದ್ದಳು. ಪ್ರತಿನಿತ್ಯ ತಂದೆಯೇ ಮಗಳನ್ನ ಶಾಲೆಗೆ ಬಿಟ್ಟು ಕೆಲಸಕ್ಕೆ ಹೋಗ್ತಿದ್ರು. ಇಂದು ಸಹ ಅದೇ ರೀತಿ ಮಗಳನ್ನ ಶಾಲೆಗೆ ಬಿಡಲು ಹೋಗಿದ್ರು. ಆ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಪೂರ್ವಿ ಮೇಲೆ ಹರಿದಿದೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗ್ಲೆ ಬಿಎಂಟಿಸಿ ಚಾಲಕನನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ. ತನಿಖೆ ವೇಳೆ ಬಿಎಂಟಿಸಿ ಬಸ್ ಚಾಲಕನದ್ದೇ ತಪ್ಪು ಎಂಬುದು ತಿಳಿದು ಬಂದಿದೆ. ಪೂರ್ವಿ ಮತ್ತು ತಂದೆ ಪ್ರಸನ್ನ ತೆರಳುತ್ತಿದ್ದ ಬೈಕ್ ಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಪೂರ್ವಿ ಮತ್ತು ಪ್ರಸನ್ನ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಪೂರ್ವಿ ತಲೆ ಮೇಲೆ ಬಸ್ ಹರಿದಿದೆ. ಬಿಎಂಟಿಸಿ ಬಸ್ ಮತ್ತು ಚಾಲಕ ಬಸವರಾಜ ಪೂಜಾರಿಯನ್ನು ವಶಕ್ಕೆ ಪಡೆದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌