LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಮಾರ್ಗ ದಿನದ 24 ಗಂಟೆ ವಾಹನ ಸಂಚಾರ ಪುನಾರಂಭ

ಮಂಗಳೂರು: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಸಮೀಪದ ಶಿರಾಡಿ ಮಾರ್ಗ ನಡುವೆ ಭೂ ಕುಸಿತ ಸಂಭವಿಸಿದ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ದಿನದ 24 ಗಂಟೆ ವಾಹನಗಳ ಸಂಚಾರಕ್ಕೆ ಅವಕಾಶ ಆರಂಭಿಸಲಾಗಿದೆ. ಶನಿವಾರ ರಾತ್ರಿಯೇ ಕೆಲವು ವಾಹನಗಳಿಗೆ ಈ ಮಾರ್ಗದಲ್ಲಿ ಸಂಚರಿಸಲು ಅವಕಾಶ ಒದಗಿಸಲಾಗಿದ್ದು, ರವಿವಾರ ರಾತ್ರಿಯಿಂದ ಪೂರ್ಣ ಪ್ರಮಾಣದಲ್ಲಿ ಅವಕಾಶ ಒದಗಿಸಲಾಗುತ್ತಿದೆ ಎನ್ನುವ ಮಾಹಿತಿಯನ್ನು ಉನ್ನತ ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೆ ಈ ಕುರಿತು ಹಾಸನ ಜಿಲ್ಲಾಧಿಕಾರಿಯಿಂದ ರವಿವಾರ ಸಂಜೆಯ ತನಕ ಅಧಿಕೃತ ಆದೇಶ ಹೊರಬಿದ್ದಿಲ್ಲ. ಭೂ ಕುಸಿತ ಸಂಭವಿಸಿದ ಬಳಿಕ ಈ ಮಾರ್ಗ ಶಿರಾಡಿ ಘಾಟಿ ಪ್ರದೇಶದಲ್ಲಿ ಬೆಳಗ್ಗೆ 6ರಿಂದ ರಾತ್ರಿ 6 ತನಕ ಮಾತ್ರ ವಾಹನಗಳ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ಮಂಗಳೂರು ನಿಲ್ದಾಣದಿಂದ ಹೊರಟ ಬಸ್‌ಗಳು ಗುಂಡ್ಯ ಭಾಗದಲ್ಲಿ ಹಾಗೂ ಬೆಂಗಳೂರಿನಿಂದ ರಾತ್ರಿ ಹೊರಟ ಬಸ್ ಸಕಲೇಶಪುರದಲ್ಲಿ ಸುಮಾರು 2:30 ಗಂಟೆ ಕಾಯುವ ಪರಿಸ್ಥಿತಿ ಇತ್ತು. ಈ ಸಮಸ್ಯೆ ಸದ್ಯ ನಿವಾರಣೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?