LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: ಮತ್ತೆ ಸದ್ದು ಮಾಡುತ್ತಿದೆ ಹುಸಿ ಬಾಂಬ್ ಗುಮ್ಮ‌ - ಖಾಸಗಿ ಕಂಪನಿಗೆ ಬಾಂಬ್ ಮೇಲ್

ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಗುಮ್ಮ ಮತ್ತೆ ಸದ್ದು ಮಾಡಿದೆ. ಇಷ್ಟು ದಿನ ಶಾಲಾ ಕಾಲೇಜಿಗೆ ಬಾಂಬ್ ಮೇಲ್ ಮಾಡ್ತಿದ್ದ ಕಿಡಿಗೇಡಿಗಳು ಈ ಬಾರಿ ಖಾಸಗಿ ಕಂಪನಿಯಲ್ಲಿ ಬಾಂಬ್ ಇರಿಸಿರುವುದಾಗಿ ಹುಸಿ ಮೇಲ್ ಮಾಡಿದ್ದಾರೆ. ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿರುವ ಬ್ರಾಡ್‌ಕಾಮ್ ಕಂಪನಿಗೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೇಲ್ ರವಾನಿಸಲಾಗಿದೆ. ಕಂಪನಿಯ ಆವರಣದಲ್ಲಿ ಬಾಂಬ್ ಇರಿಸಿದ್ದು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಬೆದರಿಸಿದ್ದಾರೆ. ತಕ್ಷಣ ಎಚ್ಚೆತ್ತ ಕಂಪನಿಯವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅದೊಂದು ಹುಸಿ ಬೆದರಿಕೆ ಎಂಬುದು ಪತ್ತೆಯಾಗಿದೆ. ಬ್ರಾಡ್‌ಕಾಮ್ ಕಂಪನಿಯ ಪ್ರತಿನಿಧಿ ನೀಡಿರುವ ದೂರಿನನ್ವಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್.ಬಿ.ಜಗಲಾಸರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ