ಬೆಂಗಳೂರು ಸೇರಿದಂತೆ 3 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!
ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.