LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಬೆಲೆ ಇಷ್ಟು.!

 

ಚಿತ್ರದುರ್ಗ: ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ ಮಾರಾಟ ಮಂಡಳಿ ವತಿಯಿಂದ ಕ್ವಿಂಟಲ್‌ಗೆ ರೂ.8,682/-ರಂತೆ ಖರೀದಿ ಮಾಡಲಿದ್ದಾರೆ.

ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಆದ್ದರಿಂದ ಜಿಲ್ಲೆಯಲ್ಲಿ ಹೆಸರುಕಾಳು ಬೆಳೆಗಾರರು ಪ್ರತಿ ಎಕೆರೆಗೆ 2 ಕ್ವಿಂಟಲ್ ಹಾಗೂ ಗರಿಷ್ಟ 10 ಕ್ವಿಂಟಲ್‌ವರೆಗೆ ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಪ್ರಾರಂಭಿಸುವ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಚಿತ್ರದುರ್ಗ ಹಾಗೂ ಹೊಸದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST