Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿಯಲ್ಲಿ ಜೂ.10 ರಂದು ಅಂತರಾಷ್ಟ್ರೀಯ ಮಾಧ್ಯಮ ಸಮ್ಮೇಳನ

 

ಬೆಳಗಾವಿ :
ಬೆಳಗಾವಿ ಜಿಲ್ಲೆ ಅಷ್ಟೇ ಏಕೆ ರಾಜ್ಯದಲ್ಲಿಯೇ ಪ್ರಪ್ರಥಮಬಾರಿಗೆ ಅಂತರರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಕುಂದಾನಗರಿ ಬೆಳಗಾವಿಯಲ್ಲಿ ಜೂನ್ 10, 2023 ರಂದು ನೆಹರು ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.

ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪತ್ರಕರ್ತರನ್ನು ಒಂದೇ ಸೂರಿನಡಿ ಹಾಗೂ ಖ್ಯಾತ ಸಂಪಾದಕರು ಹಾಗೂ ಸಾಧಕರನ್ನು ಒಂದೇ ವೇದಿಕೆಯ ಮೇಲೆ ಸತ್ಕರಿಸಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.

ಚಿಂತನ ಗೋಷ್ಠಿ:
ಪರಿಸರ ನಾಶ ಮತ್ತು ಪತ್ರಕರ್ತರ ಜವಾಬ್ದಾರಿ; ಜಾಗತಿಕ ತಾಪಮಾನ ಏರಿಕೆ, ಮತ್ತು ವರದಿಗಾರಿಕೆ ಕುರಿತು ಚಿಂತನಗೋಷ್ಠಿ ನಡೆಯಲಿವೆ.

1. ಎಚ್ ಆರ್ ರಂಗನಾಥ , ಪ್ರಧಾನ ಸಂಪಾದರು ಪಬ್ಲಿಕ್ ಟಿವಿ.
2. ಸನತ್ ಜಯಸೂರ್ಯ ಖ್ಯಾತ ಕ್ರಿಕೆಟ್ ಪಟು ಶ್ರೀಲಂಕಾ.
3. ಚಲಕಾ ಗಜಬಾಹು, ಎಡಿ‌ ಪ್ರವಾಸೋದ್ಯಮ ಉತ್ತೇಜನ ಸಮಿತಿ ಶ್ರೀಲಂಕಾ.

3. ಆನಂದ ಸಂಕೇಶ್ವರ , ಎಂ ಡಿ. ವಿ‌ ಆರ್ ಎಲ್ ಗ್ರೂಪ್.

4. ಸಂಜಯ ಘೋಡಾವತ , MD ಸ್ಟಾರ್ ಏರ್ ಲೈನ್ಸ್, ಕೊಲ್ಲಾಪುರ

5. ಗೀತಿಕಾ , ಅಂತರಾಷ್ಟ್ರೀಯ ಪತ್ರಕರ್ತೆ, ಕೊರಿಯಾ ಅವರು ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಡಾ: ಭೀಮಶಿ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿಲೀಪ್ ಕುರಂದವಾಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ವಿ.ಪ್ರಭಾಕರ್ ಅವರಿಗೆ ಆಹ್ವಾನ:
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ಅ‌ಭಿನಂದನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಜೂ.10 ಶನಿವಾರದಂದು ಬೆಳಗಾವಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಾಧ್ಯಮ ಸಮ್ಮೇಳನದಲ್ಲಿ ಅವರನ್ನು ಸನ್ಮಾನಿಸಲಾಗುವುದು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ) ಬೆಳಗಾವಿ ಜಿಲ್ಲಾ ಘಟಕದಿಂದ ಗೌರವ ಸನ್ಮಾನಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿ ಅವರಿಗೆ ಮಂಗಳವಾರ(ಮೇ 22) ಆಹ್ವಾನ ನೀಡಲಾಯಿತು.

ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರುಂದವಾಡೆ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಭೀ. ಬಾಳೋಜಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ಸಂಚಾಲಕ ಎಚ್.ಬಿ.ಮದನಗೌಡ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ