E-PAPER
17 Nov 2026, 12:20:00 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರ * ಜವಳಿ ಸಚಿವರಿಂದ ಶಂಕುಸ್ಥಾಪನೆ

ಉತ್ತರ ಕರ್ನಾಟಕದ ನೇಕಾರರಿಗೆ ಅನುಕೂಲ

ಬೆಳಗಾವಿ-೧೮: ಜಿಲ್ಲೆಯ ಜವಳಿ ಕ್ಷೇತ್ರದ ನೇಕಾರರು ಉನ್ನತ ತರಬೇತಿ ಪಡೆದು ಕೈಗಾರಿಕೆ ಸ್ಥಾಪನೆ ಹಾಗೂ ಹೆಚ್ಚಿನ ಉದ್ಯೋಗಾವಕಾಶ ಪಡೆಯುವ ಉದ್ದೇಶದಿಂದ ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರವನ್ನು ಆರಂಭಿಸಲಾಗುತ್ತಿದೆ ಎಂದು ಜವಳಿ ಸಚಿವ ಶಿವಾನಂದ ಎಸ್‌. ಪಾಟೀಲ ಹೇಳಿದರು.

ಬೆಳಗಾವಿಯ ಉದ್ಯಮಭಾಗದಲ್ಲಿ ಬುಧವಾರ ವಿದ್ಯುತ್‌ ಮಗ್ಗ ಸೇವಾ ಕೇಂದ್ರ ಹಾಗೂ ಕೆಎಸ್‌ಟಿಐಡಿಸಿಎಲ್‌ ಆಡಳಿತ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 23,200 ವಿದ್ಯುತ್‌ ಮಗ್ಗಗಳು, 185 ಏರ್‌ಜೆಟ್‌ ಮಗ್ಗಗಳು, 3,900 ರೇಪಿಯರ್‌ ಮಗ್ಗಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳಿಗೆ ವಿದ್ಯುತ್‌ ಮಗ್ಗ ಸೇವಾ ಕೇಂದ್ರದಿಂದ ಉನ್ನತ ತರಬೇತಿ ನೀಡಿ ಆಧುನೀಕರಣಗೊಳಿಸಲು ಹಾಗೂ ಅಗತ್ಯ ನೂಲು, ಬಣ್ಣ, ಮತ್ತು ಬಟ್ಟೆಯ ಪರೀಕ್ಷೆಗೆ ಅನುಕೂಲವಾಗಲಿದೆ . ಅಷ್ಟೇ ಅಲ್ಲ ಉತ್ತರ ಕರ್ನಾಟಕದ ಇತರ ಜಿಲ್ಲೆಗಳಿಗೂ ಈ ತರಬೇತಿ ಕೇಂದ್ರದಿಂದ ಅನುಕೂಲವಾಗಲಿದೆ ಎಂದರು.

ಕಟ್ಟಡ ನಿರ್ಮಾಣವಾದ ನಂತರ ತರಬೇತಿ ಕೇಂದ್ರದಿಂದ ಉತ್ತರ ಕರ್ನಾಟಕ ಭಾಗದ ನೇಕಾರರು ಉನ್ನತ ಮಟ್ಟದ ತಂತ್ರಜ್ಞಾನದಲ್ಲಿ ನೇಕಾರಿಕೆ ತರಬೇತಿ ಹಾಗೂ ನೂಲು ಮತ್ತು ಬಟ್ಟೆ ಪರಿಶೀಲನೆ ಮಾಡಲು ಬಳಸಿಕೊಳ್ಳಬಹುದು. ತರಬೇತಿ ಕೇಂದ್ರಕ್ಕೆ ಏರ್‌ಜೆಟ್‌, ವಾಟರ್‌ಜೆಟ್‌ ಮತ್ತು ರೇಪಿಯರ್‌ ಮಗ್ಗಗಳನ್ನು ಎಲೆಕ್ಟ್ರಾನಿಕ್‌ ಜಕಾರ್ಡ್‌ದೊಂದಿಗೆ ಸಲಕರಣೆಗಳನ್ನು ಅಳವಡಿಸಬಹುದಾಗಿದೆ ಎಂದು ವಿವರಿಸಿದರು.

2.21 ಕೋಟಿ ರೂ. ವೆಚ್ಚದ ಈ ಯೋಜನೆಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದರು.

ಬೆಳಗಾವಿ (ದಕ್ಷಿಣ) ಶಾಸಕ ಅಭಯ ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದರು. ಜವಳಿ ಇಲಾಖೆ ಆಯುಕ್ತೆ ಕೆ. ಜ್ಯೋತಿ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದದ ವ್ಯವಸ್ಥಾಪಕ ನಿರ್ದೇಶಕ ಎಸ್.‌ ಪ್ರಕಾಶ್‌, ಜವಳಿ ಇಲಾಖೆ ಸಲಹೆಗಾರ ರಮಾನಂದ ಕುಲಕರ್ಣಿ, ಜಂಟಿ ನಿರ್ದೇಶಕ ಶಿವರಾಜ್‌ ಕುಲಕರ್ಣಿ, ಉಪನಿರ್ದೇಶಕ ವಾಸುದೇವ್‌ ದೊಡ್ಡಮನಿ, ಎನ್‌. ರವೀಂದ್ರ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.