E-PAPER
17 Nov 2026, 12:21:10 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿ ಜಿಲ್ಲೆಯ ಶಾಸಕರು ಪಕ್ಷಾತೀತವಾಗಿ ಹೋರಾಡಲಿ - ರಾಜೀವ ಟೋಪಣ್ಣವರ

ಬೆಳಗಾವಿ-೧೬: ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯ ಬೆಳಗಾವಿ ಜಿಲ್ಲೆಯ ಮುಖ್ಯ ಜಲದ ಮೂಲವಾಗಿದ್ದು ಬೆಳಗಾವಿ ಮಹಾನಗರದ ಜೀವನಾಡಿ ಆಗಿದ್ದು ಈ ಜಲಾಶಯದಿಂದ ಹುಬ್ಬಳ್ಳಿ ಧಾರವಾಡಕ್ಕೆ ಬೃಹತ್ ಪ್ರಮಾಣದ ನೀರು ಸರಬರಾಜು ಮಾಡುವ ಕಾಮಗಾರಿ ಆರಂಭವಾಗಿದ್ದು ಇದಕ್ಕೆ ವಿರೋಧ ಮಾಡದೇ ಮೌನ ವಹಿಸಿರುವ ಬೆಳಗಾವಿ ಜಿಲ್ಲೆಯ ಶಾಸಕರ ವಿರುದ್ಧ ಯುವ ನಾಯಕ ರಾಜೀವ ಟೋಪಣ್ಣವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ವರ್ಷಕ್ಕೆ ಐದು ಟಿಎಂಸಿ ನೀರು ಸರಬರಾಜು ಮಾಡುವ ಕಾಮಗಾರಿ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಶಾಸಕರು ತಕ್ಷಣ ಪಕ್ಷಾತೀತವಾಗಿ ಸಭೆ ಸೇರಿ ಕಾಮಗಾರಿಯನ್ನು ತಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ರಾಜೀವ ಟೋಪಣ್ಣವರ ಒತ್ತಾಯಿಸಿದ್ದಾರೆ.

ಬೆಳಗಾವಿಯ ಮಲಪ್ರಭಾ ನದಿಯ ನವೀಲತೀರ್ಥ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಮಹಾನಗರಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಈಗ ಹಿಡಕಲ್ ಜಲಾಶಯದಿಂದಲೂ ನೀರು ಸರಬರಾಜು ಮಾಡಿದ್ರೆ ಬೆಳಗಾವಿ ಮಹಾನಗರದ ಜನತೆ ಮತ್ತು ಬೆಳಗಾವಿ ಜಿಲ್ಲೆಯ ರೈತರು ನೀರಿನ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ರಾಜೀವ ಟೋಪಣ್ಣವರ ಈ ವಿಚಾರವನ್ನು ಬೆಳಗಾವಿ ಜಿಲ್ಲೆಯ ಶಾಸಕರು ಗಂಭೀರವಾಗಿ ಪರಗಣಿಸಬೇಕು ಎಂದು ಟೋಪಣ್ಣವರ ಮನವಿ ಮಾಡಿಕೊಂಡಿದ್ದಾರೆ.

ಬೆಳಗಾವಿಯ ವಿಮಾನ,ಬೆಳಗಾವಿಯ ರೈಲು,ಬೆಳಗಾವಿಯ ಕಚೇರಿಗಳನ್ನು ಹುಬ್ಬಳ್ಳಿಗೆ ಸ್ಥಳಾಂತರ ಮಾಡಿದ ಬೆನ್ನಲ್ಲಿಯೇ ಈಗ ಬೆಳಗಾವಿ ಜಿಲ್ಲೆಯ ಜಲದ ಮೂಲಕ್ಕೂ ಕಣ್ಣು ಹಾಕಿರುವ ಹುಬ್ಬಳ್ಳಿ - ಧಾರವಾಡದ ಜನಪ್ರತಿನಿಧಿಗಳಿಗೆ ಲಗಾಮು ಹಾಕುವ ಕಾರ್ಯವನ್ನು ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಮಾಡಬೇಕಾಗಿದ್ದು ಈ ವಿಚಾರದಲ್ಲಿ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮುಂದಾಳತ್ವ ವಹಿಸಬೇಕೆಂದು ರಾಜೀವ ಟೋಪಣ್ಣವರ ಆಗ್ರಹಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಗೆ ಪದೇ ಪದೇ ಅನ್ಯಾಯ ಆಗುತ್ತಲೇ ಇದೆ. ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ದೆಹಲಿಯ ಪೋಟೋಸೇಷನ್ ಬಿಟ್ಟು ಬೆಳಗಾವಿ ಜಿಲ್ಲೆಯ ಹಿತ ಕಾಪಾಡಬೇಕು , ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಹಿಡಕಲ್ ಜಲಾಶಯದ ನೀರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ಟೋಪಣ್ಣವರ ಮನವಿ ಮಾಡಿದ್ದಾರೆ‌.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.