E-PAPER
17 Nov 2026, 12:23:12 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ ದಕ್ಷಿಣ, ಉತ್ತರ ಕ್ಷೇತ್ರಕ್ಕೆ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ

ಬೆಳಗಾವಿ-12: ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನತೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ತಿಳಿಸಿದರು.

ಬೆಳಗಾವಿ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ನೀರಿನ ಟ್ಯಾಂಕರ್ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಚಿವ ಸತೀಶ್‌ ಜಾರಕಿಹೊಳಿ ಅವರ ಸಲಹೆ, ಸೂಚನೆ ಮೇರೆಗೆ ಸತೀಶ್‌ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೇವೆ. ಈಗ ಬೇಸಿಗೆ ಆರಂಭವಾಗುತ್ತಿದ್ದು, ಜನತೆಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಉಚಿತ ನೀರಿನ ಟ್ಯಾಂಕರ್‌ ನೀಡುತ್ತಿದ್ದೇವೆ. ನಗರ ಸ್ವಚ್ಛತೆಗಾಗಿ ಕಸ ವಿಲೇವಾರಿ ಮಾಡಲು ವಾಹನ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಎರಡೆರಡು ವಾಹನ ವಿತರಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನರು ನೀರಿನ ಸಮಸ್ಯೆ ಇದ್ದಲ್ಲಿ ಪುರಸಭೆ ಸದಸ್ಯರ ಗಮನಕ್ಕೆ ತನ್ನಿ, ಪುರಸಭೆ ಸದಸ್ಯರು ಸತೀಶ್‌ ಜಾರಕಿಹೊಳಿ ಫೌಂಡೇಶನ್ ತಂಡಕ್ಕೆ ತಿಳಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತಾರೆ. ಸಾರ್ವಜನಿಕರ ಕಾರ್ಯಕ್ರಮಗಳಿಗೂ ನಮ್ಮ ತಂಡ ನೀರು ಒದಗಿಸುತ್ತದೆ ಎಂದರು.

ಶಾಸಕ ಆಸೀಪ್‌ (ರಾಜು) ಸೇಠ್‌ ಮಾತನಾಡಿ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪೌರಾಯುಕ್ತೆ ರಾಜೇಶ್ರಿ ಜೈನಾಪುರೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್‌, ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಎಂ.ಜೆ, ಕಿರಣ ಸಾಧುನ್ನವರ್, ಕಿರಣ ಪಾಟೀಲ್, ಪರಶುರಾಮ ಧಗೆ, ಅರವಿಂದ ಕಾರ್ಚಿ, ಆಯಿಷಾ ಸನದಿ, ಪ್ರಭಾವತಿ ಪಾಟೀಲ್, ಪುರಸಭೆ ಸದಸ್ಯರಾದ ಅಪ್ರೋಜ್ ಮುಲ್ಲಾ, ಅಜೀಂ ಪಟೇಗಾರ್, ಖುರ್ಸಿದ್ದ ಮುಲ್ಲಾ, ರವಿ ನಾಳುಂಕೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು, ಮಹಿಳಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.