LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ.

ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು.

ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದು, ಇನ್ನೋರ್ವ ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿವಾಹಿತೆ. ಶಿಕ್ಷಕಿಯೂ ಆಗಿದ್ದ ಅವರ ಪತ್ನಿ ಐದು ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!