E-PAPER
17 Nov 2026, 12:19:52 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೈಲಹೊಂಗಲ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪುನಶ್ಚೇತನ ತರಬೇತಿ ಕಾರ್ಯಾಗಾರ

ಬೆಳಗಾವಿ-೨೦:ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಎಲ್ಲಾ 35ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಬೈಲಹೊಂಗಲ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಮಂಗಳವಾರದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನೂ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಂಗಾಧರ ಕಂದಕೂರ ಅವರು ವಹಿಸಿದ್ದರು ಹಾಗೂ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಶ್ರೀ ರಘುಅವರು ಮತ್ತು ಕಚೇರಿಯ ಸಹಿಯಕರು ಉಪಸ್ಥಿತರಿದ್ದರು. ಶಿಕ್ಷಣ ಫೌಂಡೇಶನನ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ಶ್ರೀ ಶ್ರೀಶೈಲ ಅಥಣಿ, ಬೆಳಗಾವಿ ಜಿಲ್ಲಾ ಸಂಯೋಜಕರಾದ ಬಾಳಪ್ಪಾ ಮಡಿವಾಳರ ಬೈಲಹೊಂಗಲ ತಾಲೂಕು ಸಂಯೋಜಕರಾದ ಗೀತಾ ಗುಜನಾಳ, ಶ್ರೀ ಮಹದೇವ ಮಲಶೆಟ್ಟಿ,ವೀರಣ್ಣ ಗುಂಡಗಾಂವಿ,ಶ್ರೀದೇವಿ ಬೈಲವಾಡ ಮತ್ತು ತಾಲೂಕಿನ ಗ್ರಂಥಾಲಯ ಸಂಘದ ಅಧ್ಯಕ್ಷರಾದ ಸಿ.ಬಿ.ಕಳಸನ್ನವರ , ಉಪಾಧ್ಯಕ್ಷರಾದ ಕೆ.ಟಿ.ಹೂಗಾರ ಇನ್ನೂಳಿದ ಎಲ್ಲ ಮೇಲ್ವಿಚಾರಕರು ಉಪಸ್ಥಿತರಿದ್ದರು.ಶ್ರೀಶೈಲ ಅಥಣಿ ಶಿಕ್ಷಣ ಫೌಂಡೇಶನ್ ಹಿನ್ನೆಲೆ ಬೆಳೆದು ಬಂದ ಹಾದಿ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಪರಿಚಯ ಮಾಡಿಕೊಟ್ಟರು. ನಂತರ ಇ.ಓ ಸರ್ ಅವರು ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ನೀಡಿದ ಡಿಜಿಟಲ್ ಡಿವೈಸ್ ಗಳನ್ನು ಸಮರ್ಪಕವಾಗಿ ಬಳಸಬೇಕೆಂದು ತಿಳಿಸಿದರು ಮತ್ತು ಈ ಶತಮಾನಕ್ಕೆ ಬೇಕಾದ ಡಿಜಿಟಲ್ ಕೌಶಲ್ಯಗಳನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.ಬೆಳಗಾವಿ ವಲಯ ಸಂಯೋಜಕರು ಶ್ರೀಶೈಲ ಅಥಣಿ ಸರ್ ಅವರು ಕಂಪ್ಯೂಟರ್ ಮೂಲ ವಿಷಯಗಳಾದ ಎಂ.ಎಸ್. ಆಫೀಸ್,ಇಮೇಲ್, ಪಿಡಿಎಫ್, ಕನ್ನಡ ಟೈಪಿಂಗ್ ಇನ್ನು ಹಲವಾರು ಡಿಜಿಟಲ್ ಸಾಕ್ಷರತೆಯ ಬಗ್ಗೆ ತಿಳಿಸಿಕೊಟ್ಟರು ಹಾಗೂ ಶಿಕ್ಷಣ ಪೀಡಿಯಾ ಅಪ್ಲಿಕೇಶನ್ ಬಗ್ಗೆ ಮಾಹಿತಿ ನೀಡಿದರು . ಶಿಕ್ಷಣ ಪಿಡಿಯಾ ಅಪ್ಲಿಕೇಶನ್ ಅಕಾಡೆಮಿಕ್ಸ್, ಡಿಜಿಟಲ್ ಸ್ಕಿಲ್ಸ್ ಹಾಗೂ ಸ್ಟೋರೀಸ್ ಎಂಬ 3 ಭಾಗಗಳನ್ನು ಒಳಗೊಂಡಿದ್ದು ಅಕಾಡೆಮಿಕ್ಸ್ ಅಲ್ಲಿ 8,9,10,12ನೆಯ ತರಗತಿಯ ಪಠ್ಯ ಪುಸ್ತಕದ ಪಾಠಗಳ ವಿಡಿಯೋ ಗಳಿದ್ದು, ಸ್ಕಿಲ್ಸ್ ಅಲ್ಲಿ ಡಿಜಿಟಲ್ ಸಾಕ್ಷರತೆ ಬಗ್ಗೆ ಅಂದರೆ ಡಿವೈಸ್ , ಡಿವೈಸ ಸೆಪ್ಟಿ,ಹಾರ್ಡ್ವೇರ್ ಅಂಡ್ ಸಾಪ್ಟ್ವೇರ್, ಇಂಟರ್ನೆಟ್, ಇಮೇಲ್, ಗೂಗಲ್ ಡ್ರೈವ್ ಹಾಗೂ ಇನ್ನಿತರ ಡಿಜಿಟಲ್ ಸಾಕ್ಷರತೆ ಬಗ್ಗೆ ವಿಡಿಯೋ ಗಳನ್ನು ನೀಡಲಾಗಿದೆ. ಹಾಗೂ ಸ್ಟೋರೀಸ್ ಅಲ್ಲಿ ಚಿಕ್ಕ ಮಕ್ಕಳಿಗಾಗಿ ಕಥೆಗಳನ್ನು ನೀಡಲಾಗಿದ್ದು. ಗ್ರಾಮೀಣ ಭಾಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಮತ್ತು ತಮ್ಮ ವೃತ್ತಿ ಜೀವನಕ್ಕೆ ತುಂಬಾ ಉಪಯುಕ್ತವಾದ ಮಾಹಿತಿಯನ್ನು ಅಳವಡಿಸಲಾಗಿದೆ . ಇದರ ಮುಖಾಂತರ ಗ್ರಾಮೀಣ ಭಾಗದ ಮಕ್ಕಳು ಪ್ರಯೋಜನ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿಕೊಟ್ಟರು .

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.