LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೊಮ್ಮಾಯಿ ಸೇರಿ 28 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಬೆಂಗಳೂರು: ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ 28 ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಜೂನ್ 20, 2023 ರಂದು ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರೇಸ್‌ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನೀತಿಗಳು ಜನವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕ ಮುನಿರಾಜು, ಮೇಲ್ಮನೆ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಒಟ್ಟಾರೆಯಾಗಿ, ಅನುಮತಿ ಇಲ್ಲದೇ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ 28 ಮುಖಂಡರ ಹೆಸರು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, "ಬಿಜೆಪಿ ನಾಯಕರು ಕಾನೂನು ಗೊತ್ತಿದ್ದೂ ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವಿಲ್ಲ, ನಾವು ಪ್ರತಿಭಟನೆ ಮಾಡಿದರೂ ಪೊಲೀಸರ ಅನುಮತಿಯನ್ನು ಯಾವಾಗಲೂ ಪಡೆಯುತ್ತೇವೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು" ಎಂದು ಹೇಳಿದ್ದಾರೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!